ಮಂಗಳೂರು : ಶಾಮಿಯಾನ ಸಾಮಾಗ್ರಿ ಹೊತ್ತೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರವಾಗಿ ಗಾಯವಾದ ಘಟನೆ ಬಂಟ್ವಾಳದ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಫರಂಗಿಪೇಟೆ ನಿವಾಸಿ ಕಾರ್ತಿಕ್ ಮೃತ ದುರ್ದೈವಿ.
ಕಾವಳಪಡೂರು ಗ್ರಾಮದ ಮಧ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಬಂಟ್ವಾಳದ ವಗ್ಗದಿಂದ ಬೆಳ್ತಂಗಡಿ ಕಡೆ ಶಾಮಿಯಾನದ ಸಾಮಾಗ್ರಿಗಳನ್ನು ಹೊತ್ತು ತೆರಳುತ್ತಿದ್ದ ವೇಳೆ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಲಾರಿಯಲ್ಲಿ ಒಟ್ಟು ಹತ್ತು ಮಂದಿ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಹಲವರಿಗೆ ಗಾಯವಾಗಿದ್ದು, ಸದ್ಯ ಗಾಯಳುಗಳನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಂಜಾಲಕಟ್ಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಡೆತ್ನೋಟ್ ಬರೆದಿಟ್ಟು ಬೆಂಗಳೂರಿನಲ್ಲಿ ಯೂಟ್ಯೂಬರ್ ಆತ್ಮಹ*ತ್ಯೆ..!
Post Views: 79