ಶಿವಣ್ಣನ 135ನೇ ಸಿನಿಮಾ: ನಿರ್ದೇಶಕ ಹರಿ ಜಯಣ್ಣ ಜೊತೆ ಫ್ಯಾಮಿಲಿ ಎಂಟರ್‌ಟೈನರ್..!

ಬೆಂಗಳೂರು : ಕರುನಾಡ ಚಕ್ರವರ್ತಿ ಡಾ. ಶಿವರಾಜಕುಮಾರ್ ಅಭಿನಯದ 135ನೇ ಚಿತ್ರವನ್ನು ಆಫ್ರೋಡೈಟ್ ರಿನೈಸ್ಸಾನ್ಸ್ ಟಾಕೀಸ್ ಬ್ಯಾನರ್ ಅಡಿಯಲ್ಲಿ ರಾಜ ರವರು ಮೊದಲ ಬಾರಿಗೆ ನಿರ್ಮಾಣ ಮಾಡುತ್ತಿದ್ದಾರೆ. ಪದವಿಪೂರ್ವ ಚಿತ್ರದ ಖ್ಯಾತಿಯ ನಿರ್ದೇಶಕ ಹರಿ ಜಯಣ್ಣ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ.

ಇದೊಂದು ಫ್ಯಾಮಿಲಿ ಎಂಟರ್ಟೈನರ್ ಚಿತ್ರವಾಗಿದ್ದು ಶಿವಣ್ಣ ವಿಭಿನ್ನ ಹಾಗೂ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮುಂದಿನ ವರ್ಷದ ಪ್ರಾರಂಭದಲ್ಲಿ ಚಿತ್ರೀಕರಣ ಶುರುವಾಗಲಿದ್ದು ಚಿತ್ರದ ಸ್ಕ್ರಿಪ್ಟ್ ಮತ್ತು ಪ್ರೀ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

ನಾಯಕಿ ಹಾಗೂ ಇನ್ನಿತರ ಪ್ರಮುಖ ಪಾತ್ರಗಳ ಆಯ್ಕೆ ನಡೆಯುತ್ತಿದ್ದು, ಉಳಿದ ಕಲಾವಿದರು ಹಾಗೂ ತಂತ್ರಜ್ಞರನ್ನು ಇನ್ನು ಕೆಲವು ದಿನಗಳಲ್ಲಿ ಅಂತಿಮಗೊಳಿಸಲಾಗುವುದು. ಇದು ತಮ್ಮ ಸಂಸ್ಥೆ ಮತ್ತು ತಂಡದಿಂದ ಶಿವಣ್ಣನ ಅಭಿಮಾನಿಗಳಿಗೆ ದೀಪಾವಳಿ ಉಡುಗೊರೆ ಎಂದು ನಿರ್ಮಾಪಕರು ಹೇಳಿದ್ದಾರೆ.

ಇದನ್ನು ಓದಿ : ಚಾಮರಾಜನಗರದ ಬಂಡೀಪುರದಲ್ಲಿ ಪ್ರವಾಸಿಗರಿಗೆ ರಾಜಗಾಂಭೀರ್ಯದ ಹುಲಿ ದರ್ಶನ!

Btv Kannada
Author: Btv Kannada

Read More