Download Our App

Follow us

Home » ಅಪರಾಧ » ಇಂದು ಸೂರಜ್ ರೇವಣ್ಣ‌ ಜಾಮೀನು ಆದೇಶ ಪ್ರಕಟಿಸಲಿರೋ ಕೋರ್ಟ್..!

ಇಂದು ಸೂರಜ್ ರೇವಣ್ಣ‌ ಜಾಮೀನು ಆದೇಶ ಪ್ರಕಟಿಸಲಿರೋ ಕೋರ್ಟ್..!

ಬೆಂಗಳೂರು : ಸಲಿಂಗ ಕಾಮ ಪ್ರಕರಣದಲ್ಲಿ ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್​ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸೂರಜ್​ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೋಮವಾರಕ್ಕೆ ಮುಂದೂಡಿತ್ತು.

ಕೋರ್ಟ್​ ಇಂದು ಸೂರಜ್ ರೇವಣ್ಣ‌ ಜಾಮೀನು ಆದೇಶವನ್ನು ಪ್ರಕಟಿಸಲಿದೆ. ಸೂರಜ್ ರೇವಣ್ಣ‌ ವಿರುದ್ಧ ಹೊಳೆನರಸೀಪುರ ಗ್ರಾಮೀಣ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದು, ಎರಡು ಪ್ರಕರಣಗಳಲ್ಲಿ ಸೂರಜ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಎರಡು ಜಾಮೀನು ಅರ್ಜಿಗಳ ವಿಚಾರಣೆ ನಡೆಸಿ ಕೋರ್ಟ್ ಆದೇಶ ಕಾಯ್ದಿರಿಸಿತ್ತು.

ಹೊಳೆನರಸೀಪುರ ಗ್ರಾಮೀಣ ಠಾಣೆಯಲ್ಲಿ ಸೂರಜ್ ರೇವಣ್ಣ‌ ವಿರುದ್ಧ ಎರಡು ಸಲಿಂಗ ಕಾಮ ಪ್ರಕರಣಗಳು ದಾಖಲಾಗಿತ್ತು. ಇಂದು ಎರಡು ಅರ್ಜಿಗಳ ಸಂಬಂಧ ಕೋರ್ಟ್ ಆದೇಶ ಪ್ರಕಟಿಸಲಿದೆ.

ಪ್ರಕರಣದ ಹಿನ್ನೆಲೆ: ಹೊಳೆನರಸೀಪುರದಲ್ಲಿ ಘನ್ನಿಗಡ ಫಾರ್ಮ್ ಹೌಸ್​ಗೆ ಜೂನ್ 16ರಂದು ಕರೆಯಿಸಿಕೊಂಡು ಸೂರಜ್ ರೇವಣ್ಣ ತಮ್ಮ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ವಿಚಾರವನ್ನು ಬಹಿರಂಗಪಡಿಸಿದರೆ ಕೊಲ್ಲುವ ಬೆದರಿಕೆಯನ್ನೂ ಹಾಕಿದ್ದಾರೆ. ಈ ಸಂಬಂಧ ಹಣದ ಆಮಿಷವನ್ನೂ ಒಡ್ಡಿದ್ದರು ಎಂದು ಸಂತ್ರಸ್ತ ಯುವಕ ಸೂರಜ್ ಮತ್ತು ಅವರ ಬೆಂಬಲಿಗ ಶಿವಕುಮಾರ್ ವಿರುದ್ಧ ಜೂನ್ 22ರಂದು ದೂರು ನೀಡಿದ್ದರು. ಇದನ್ನು ಆಧರಿಸಿ ಹೊಳೆನರಸೀಪುರ ಗ್ರಾಮೀಣ ಪೊಲೀಸ್​​ ಠಾಣೆಯಲ್ಲಿ ಸೂರಜ್ ಮತ್ತು ಶಿವಕುಮಾರ್ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್​ಗಳ ಅಡಿ ಎಫ್‌ಐಆರ್ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಸೂರಜ್ ಬಂಧನವಾಗಿದೆ.

ಇದನ್ನೂ ಓದಿ : ಬಗೆದಷ್ಟೂ ಬಯಲಾಗ್ತಿದೆ ದರ್ಶನ್​​ ಗ್ಯಾಂಗ್​​ ಕ್ರೌರ್ಯ – ರೇಣುಕಾಸ್ವಾಮಿಗೆ ಸಾಯುವಂತೆ ಬಡಿದು ಮಾಡಿದ್ದೇನು?

Leave a Comment

DG Ad

RELATED LATEST NEWS

Top Headlines

ನಕಲಿ ನಕ್ಷೆ ಸೃಷ್ಟಿಸಿ ಕಟ್ಟಡ ನಿರ್ಮಾಣ – ಮಾಲೀಕನ ವಿರುದ್ಧ FIR ದಾಖಲು..!

ಬೆಂಗಳೂರು : ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ದುರಂತದ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ನಕಲಿ ನಕ್ಷೆ ತಯಾರಿಸಿ ಕಟ್ಟಡ ನಿರ್ಮಿಸಿರುವ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ರಾಜರಾಜೇಶ್ವರಿನಗರ

Live Cricket

Add Your Heading Text Here