ಕನ್ನಡದ ಖ್ಯಾತ ಸಂಗೀತ ನಿರ್ದೇಶಕ, ಗಾಯಕ ಮತ್ತು ಸಂಯೋಜಕ ರಘು ದೀಕ್ಷಿತ್ ಅವರು ಎರಡನೇ ಬಾರಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಅವರನ್ನು ರಘು ದೀಕ್ಷಿತ್ ಅವರು ಮದುವೆಯಾಗಿದ್ದಾರೆ.

ರಘು ದೀಕ್ಷಿತ್ ಮತ್ತು ವಾರಿಜಶ್ರೀ ವೇಣುಗೋಪಾಲ್ ಅವರು ಸಂಗೀತ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು, ಇಬ್ಬರಿಗೂ ಬೇಡಿಕೆ ಇದೆ. ಗಾಯಕಿಯಾಗಿ, ಕೊಳಲು ವಾದಕಿಯಾಗಿ ವಾರಿಜಶ್ರೀ ಅವರು ಖ್ಯಾತಿ ಗಳಿಸಿದ್ದಾರೆ. ಇಬ್ಬರು ಜೊತೆಯಾಗಿ ಕೆಲಸ ಮಾಡಿದ್ದಾರೆ. ಪರಿಚಯದಿಂದ ಪ್ರೀತಿ ಬೆಳೆದು, ಕುಟುಂಬದ ಒಪ್ಪಿಗೆ ಪಡೆದು ಇದೀಗ ದಾಂಪತ್ಯ ಜೀವನ ಆರಂಭಿಸಿದ್ದಾರೆ.

ಕುಟುಂಬದವರು ಹಾಗೂ ಆಪ್ತ ಸ್ನೇಹಿತರು ರಘು ದೀಕ್ಷಿತ್-ವಾರಿಜಶ್ರೀ ವಿವಾಹಕ್ಕೆ ಸಾಕ್ಷಿ ಆಗಿದ್ದಾರೆ. ಯಮುನಾ ಶ್ರೀನಿಧಿ, ಅಯ್ಯೋ ಶ್ರದ್ಧಾ ಸೇರಿದಂತೆ ಹಲವರು ಈ ಮದುವೆಯಲ್ಲಿ ಭಾಗಿಯಾಗಿದ್ದಾರೆ. ರಘು ದೀಕ್ಷಿತ್ ಮದುವೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಫೋಟೋ ನೋಡಿದ ಅಭಿಮಾನಿಗಳು ಕಮೆಂಟ್ ಮೂಲಕ ಅಭಿನಂದನೆ ತಿಳಿಸಿದ್ದಾರೆ.
ಇದನ್ನೂ ಓದಿ : ಕೋಲಾರದಲ್ಲಿ ಸೆಕ್ಯೂರಿಟಿ ಗಾರ್ಡ್ ಬರ್ಬರ ಕೊಲೆ – ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ!







