ಉಪಾಧ್ಯಕ್ಷ ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ನಾಯಕನಾಗಿ ಎಂಟ್ರಿ ಕೊಟ್ಟಿದ್ದ ಚಿಕ್ಕಣ್ಣ ಸದ್ಯ ‘ಲಕ್ಷ್ಮೀಪುತ್ರ’ ಚಿತ್ರದ ಶೂಟಿಂಗ್‌ನಲ್ಲಿ ಮಗ್ನರಾಗಿದ್ದಾರೆ. ಈ ಸಿನಿಮಾದಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ಬೆಳಕಿನ ಹಬ್ಬ ದೀಪಾವಳಿ ಹಬ್ಬಕ್ಕೆ ಲಕ್ಷ್ಮೀಪುತ್ರ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ.
ಫಸ್ಟ್ ಲುಕ್‌ನಲ್ಲಿ ಚಿಕ್ಕಣ್ಣ, ಸಾಂಪ್ರದಾಯಿಕ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡಕ ಧರಿಸಿ, ಬಾಳೆಗೊನೆಯನ್ನು ಹಿಡಿದು ನಡೆದುಕೊಂಡು ಬರುತ್ತಿದ್ದಾರೆ. ಚಿಕ್ಕಣ್ಣ ನಾಯಕನಾಗಿ ನಟಿಸುತ್ತಿರುವ ಎರಡನೇ ಚಿತ್ರ ಇದಾಗಿದ್ದು, ಈಗಾಗಲೇ ಅವರ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ.

ಲಕ್ಷ್ಮೀಪುತ್ರ ತಾಯಿ ಮಗನ ಬಾಂಧವ್ಯದ ಕಥೆಯನ್ನು ಹೊಂದಿದೆ. ಚಿತ್ರಕ್ಕೆ ಅರ್ಜುನ್ ಕಥೆ ಹಾಗೂ ಸಾಹಿತ್ಯ ಬರೆದಿದ್ದು, ಅವರ ಜೊತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ವಿಜಯ್ ಎಸ್.ಸ್ವಾಮಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
ಚಿತ್ರದಲ್ಲಿ ಚಿಕ್ಕಣ್ಣನಿಗೆ ತಾಯಿ ತಾರಾ ಅಭಿನಯಿಸುತ್ತಿದ್ದಾರೆ. ನಿರ್ದೇಶಕ ಎ.ಪಿ.ಅರ್ಜುನ್ ತಮ್ಮದೇ ಎಪಿ ಅರ್ಜುನ್ ಫಿಲ್ಮ್ಸ್‌ನಡಿ ನಿರ್ಮಾಣ ಮಾಡುತ್ತಿದ್ದಾರೆ. ಸಚಿವ ಸಂತೋಷ್ ಲಾಡ್ ಅರ್ಪಿಸುತ್ತಿರುವ ಈ ಚಿತ್ರಕ್ಕೆ ಗಿರೀಶ್ ಆರ್ ಗೌಡ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತವಿದೆ. ಮಾಸ್ ಮಾದ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಎಪಿ ಅರ್ಜುನ್, ಪ್ರಶಾಂತ್ ರಾಜಪ್ಪ ಹಾಗೂ ವಿಜಯ್ ಈಶ್ವರ್ ಸಂಭಾಷಣೆ ಬರೆದಿದ್ದರೆ, ರಾಜೇಶ್ ರಾವ್ ಸಹ ನಿರ್ದೇಶನ ಮಾಡುತ್ತಿದ್ದಾರೆ. ಎಪಿ ಅರ್ಜುನ್ ಪತ್ನಿ ಅನ್ನಪೂರ್ಣ ಅರ್ಜುನ್ ನಿರ್ಮಾಣ ಹಾಗೂ ರವಿ ಕಿರಣ್ ಕೋ ಪ್ರೊಡ್ಯೂಸರ್ ಆಗಿ ಸಾಥ್ ಕೊಟ್ಟಿದ್ದಾರೆ.
ಇದನ್ನೂ ಓದಿ : ಗಾಯಕಿ ವಾರಿಜಶ್ರೀ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಘು ದೀಕ್ಷಿತ್!







