Download Our App

Follow us

Home » ಸಿನಿಮಾ » ಸೆಟ್ಟೇರಲು ರೆಡಿಯಾದ ಶಿವಣ್ಣನ 131ನೇ ಸಿನಿಮಾ – ಹ್ಯಾಟ್ರಿಕ್ ಹೀರೋನ ಭೇಟಿಯಾದ ಚಿತ್ರತಂಡ..!

ಸೆಟ್ಟೇರಲು ರೆಡಿಯಾದ ಶಿವಣ್ಣನ 131ನೇ ಸಿನಿಮಾ – ಹ್ಯಾಟ್ರಿಕ್ ಹೀರೋನ ಭೇಟಿಯಾದ ಚಿತ್ರತಂಡ..!

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ 131ನೇ ಸಿನಿಮಾದಿಂದ ಹೊಸ ಅಪ್​​​ಡೇಟ್ ಸಿಕ್ಕಿದೆ. ಇತ್ತೀಚೆಗಷ್ಟೇ ಶಿವಣ್ಣನ ಜನ್ಮದಿನಕ್ಕೆ ಇಂಟ್ರೂಡಕ್ಷನ್ ಟೀಸರ್ ರಿಲೀಸ್ ಮಾಡಿ ಶಿವಸೈನ್ಯವನ್ನು ಒಂಟಿಗಾಲಲ್ಲಿ ನಿಲ್ಲಿಸಿದ್ದ ಚಿತ್ರತಂಡವೀಗ ಶೂಟಿಂಗ್ ಅಖಾಡಕ್ಕೆ ಇಳಿಯಲು ಸಜ್ಜಾಗಿದೆ. ಶೀಘ್ರದಲ್ಲಿಯೇ ಶಿವಣ್ಣನ 131ನೇ ಸಿನಿಮಾದ ಮುಹೂರ್ತ ನೆರವೇರಲಿದೆ.

ಶೂಟಿಂಗ್ ಅಖಾಡಕ್ಕೆ ಇಳಿಯಲು ರೆಡಿಯಾದ ಶಿವಣ್ಣ :

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ 131ನೇ ಸಿನಿಮಾದ ಶೂಟಿಂಗ್ ಅಖಾಡಕ್ಕೆ ಧುಮುಕಲು ಚಿತ್ರತಂಡ ರೆಡಿಯಾಗಿದೆ. ಅದಷ್ಟು ಬೇಗ ಮುಹೂರ್ತ ಮುಗಿಸಿಕೊಂಡು ಚಿತ್ರೀಕರಣ ನಡೆಸಲು ಸಜ್ಜಾಗಿರುವ ಬಳಗ ಇಂದು ಶಿವಣ್ಣನನ್ನು ಭೇಟಿಯಾಗಿದೆ.

ಶಿವರಾಜ್ ಕುಮಾರ್ ನಾಗವಾರ ನಿವಾಸಕ್ಕೆ ಚಿತ್ರದ ನಿರ್ದೇಶಕ ಕಾರ್ತಿಕ್ ಅದ್ವೈತ್, ನಿರ್ಮಾಪಕರಾದ ಎನ್.ಎಸ್ ರೆಡ್ಡಿ ಹಾಗೂ ಸುಧೀರ್, ಛಾಯಾಗ್ರಹಕ ಎಜೆ ಶೆಟ್ಟಿ, ಸಂಕಲನಕಾರ ದೀಪು ಎಸ್ ಕುಮಾರ್ ಭೇಟಿ ಕೊಟ್ಟಿದ್ದಾರೆ. ಬಳಿಕ ಇಡೀ ಚಿತ್ರತಂಡ  ಶಿವಣ್ಣ ಜೊತೆ ಫೋಟೋಗೆ ಪೋಸ್ ಕೊಟ್ಟಿದೆ.

ಈ ಸಿನಿಮಾದ ನಿರ್ದೇಶಕ ಕಾರ್ತಿಕ್ ಅದ್ವೈತ್, ಶಿವಣ್ಣನಿಗೆ ಆಕ್ಷನ್ ಕಟ್ ಹೇಳುವ ಮೂಲಕ ಸ್ಯಾಂಡಲ್​​​ವುಡ್​​​​ ಅಂಗಳಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಅಂದಹಾಗೇ ಇವರಿಗೆ ಇದು ನಿರ್ದೇಶಕನಾಗಿ ಎರಡನೇ ಸಿನಿಮಾ. ಇದೊಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ಡಿಫ್ರೆಂಟ್ ಲುಕ್​​​ನಲ್ಲಿ, ವಿಭಿನ್ನ ಪಾತ್ರದಲ್ಲಿ ಕಾಣಸಿಕೊಳ್ಳಲಿದ್ದಾರೆ. ಈ ಸಿನಿಮಾಕ್ಕೆ ಘೋಸ್ಟ್ ಖ್ಯಾತಿಯ ವಿಎಂ ಪ್ರಸನ್ನ ಹಾಗೂ ಸೀತಾರಾಮಂ ಖ್ಯಾತಿಯ ಜಯಕೃಷ್ಣ ಬರಹಗಾರರಾಗಿ ಸಾಥ್ ಕೊಡುತ್ತಿದ್ದಾರೆ.

ಇನ್ನು ವಿಕ್ರಂ ವೇದ, ಆರ್ ಡಿ ಎಕ್ಸ್, ಖೈದಿ ಸಿನಿಮಾ ಖ್ಯಾತಿಯ ಸ್ಯಾಮ್ ಸಿ.ಎಸ್ ಸಂಗೀತ ಒದಗಿಸಲಿದ್ದಾರೆ. ಎ.ಜೆ ಶೆಟ್ಟಿ ಛಾಯಾಗ್ರಹಣವಿದ್ದು, ದೀಪು ಎಸ್ ಕುಮಾರ್ ಅವರ ಸಂಕಲನ ಹಾಗೂ ರವಿ ಸಂತೆಹಕ್ಲು ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿರಲಿದೆ. ಭುವನೇಶ್ವರಿ ಪ್ರೊಡಕ್ಷನ್ ನಡಿ ಎಸ್.ಎನ್ ರೆಡ್ಡಿ ಹಾಗೂ ಸುಧೀರ್ ಪಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದು, ರಮಣ ರೆಡ್ಡಿ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ.

ಇದನ್ನೂ ಓದಿ : ಸರ್ಕಾರಿ ನೌಕರರು RSS ಚಟುವಟಿಕೆಗಳಲ್ಲಿ ಭಾಗವಹಿಸಬಹುದು​ – 58 ವರ್ಷಗಳ ಹಿಂದೆ ಇಂದಿರಾ ಗಾಂಧಿ ಹೇರಿದ್ದ ನಿಷೇಧ ರದ್ದು!

Leave a Comment

DG Ad

RELATED LATEST NEWS

Top Headlines

ಶಾಸಕರಿಗೆ ಸಂಕ್ರಾಂತಿ ಗಿಫ್ಟ್‌ : ತಲಾ 10 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ಧರಾಮಯ್ಯ..!

ಬೆಂಗಳೂರು : ಎಲ್ಲಾ ಪಕ್ಷದ ಶಾಸಕರಿಗೂ ತಲಾ 10 ಕೋಟಿ ರೂ. ಅನುದಾನ ಬಿಡುಗಡೆಗೆ ಸಹಿ ಹಾಕಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇತ್ತೀಚೆಗೆ ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ

Live Cricket

Add Your Heading Text Here