ಬೆಂಗಳೂರು : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ಇಂದು ಮಂಡಿಸಿದರು. ಈ ಬಜೆಟ್ನಲ್ಲಿ ಕೃಷಿ, ಉದ್ಯೋಗ, ಶಿಕ್ಷಣ ಹಾಗೂ ಇತರೆ ಎಲ್ಲಾ ಕ್ಷೇತ್ರಗಳಿಗೂ ಒತ್ತು ನೀಡಲಾಗಿದೆ.
ಬಜೆಟ್ ಮಂಡನೆಯ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ ಅವರು, ಈ ಬಜೆಟ್ನಿಂದ ಆರ್ಥಿಕತೆಗೆ ಹೊಸ ಗತಿ ಸಿಗಲಿದೆ. ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ಸಹಕಾರಿಯಾಗಿದೆ. ಇದರೊಂದಿಗೆ ಶಿಕ್ಷಣ ಮತ್ತು ಕೌಶಲ್ಯ, ಸಣ್ಣ ಉದ್ಯಮಗಳ ಪ್ರಗತಿ ಹಾಗೂ ಉದ್ಯೋಗಕ್ಕೂ ಅನುಕೂಲವಾಗಲಿದೆ ಎಂದು ಕೇಂದ್ರ ಬಜೆಟ್ ಅನ್ನು ಪ್ರಧಾನಿ ನರೇಂದ್ರ ಸಮರ್ಥನೆ ಮಾಡಿಕೊಂಡಿದ್ದಾರೆ.
ಇನ್ನು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ ಅವರು, ಮಧ್ಯಮ ವರ್ಗಕ್ಕೆ ಈ ಬಜೆಟ್ ಬೂಸ್ಟ್ ನೀಡುತ್ತೆ. ದೇಶದ ಪ್ರಗತಿಗೆ ನಿರ್ಮಲಾ ನವಶಕ್ತಿ ಕೊಟ್ಟಿದ್ದಾರೆ ಎಂದಿದ್ದಾರೆ.
ಕೇಂದ್ರ ಬಜೆಟ್ನಲ್ಲಿ ಉದ್ಯೋಗ, ಕೃಷಿ, ಕೈಗಾರಿಕೆಗೆ ಆದ್ಯತೆ ಸಿಕ್ಕಿದೆ. ಶಿಕ್ಷಣ, ಸೇವಾ ವಲಯಕ್ಕೆ ಪ್ರೋತ್ಸಾಹ ನೀಡಲಾಗಿದ್ದು, ಮೂಲ ಸೌಕರ್ಯಕ್ಕೆ ಭರಪೂರ ಅವಕಾಶ ದೊರೆತಿದೆ. ಇದು ವಿಕಸಿತ ಭಾರತದ ರೋಡ್ ಮ್ಯಾಪ್ ಎಂದು ನಿರ್ಮಲಾ ಬಜೆಟ್ಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಕೇಂದ್ರ ಬಜೆಟ್ನಲ್ಲಿ ಗ್ರಾಹಕರಿಗೆ ಗುಡ್ ನ್ಯೂಸ್ – ಮೊಬೈಲ್, ಚಿನ್ನ ಸೇರಿ ಕೆಲ ವಸ್ತುಗಳು ಅಗ್ಗ, ಯಾವುದು ದುಬಾರಿ?