ಟೆಂಡರ್ ಕೆಲಸಕ್ಕಾಗಿ ಹೂವಿನಹಡಗಲಿಗೆ ಬಂದಿದ್ದ ಗುತ್ತಿಗೆದಾರ ಸೂಸೈಡ್ – ಲಾಡ್ಜ್‌ನಲ್ಲಿ ಹುಬ್ಬಳ್ಳಿಯ ಉದ್ಯಮಿ ಆನಂದ್ ಆತ್ಮಹತ್ಯೆ!

ವಿಜಯನಗರ : ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಹುಬ್ಬಳ್ಳಿ ಮೂಲದ ಗುತ್ತಿಗೆದಾರ ಹಾಗೂ ಹೋಟೆಲ್ ಉದ್ಯಮಿ ಆನಂದ್ ಉಮೇಶ್ ಹೆಗಡೆ (40) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೂವಿನಹಡಗಲಿ ಪಟ್ಟಣದ ದಾಕ್ಷಾಯಿಣಿ ಲಾಡ್ಜ್‌ನಲ್ಲಿ ಈ ಘಟನೆ ವರದಿಯಾಗಿದೆ. ಗುತ್ತಿಗೆದಾರ ಆನಂದ್ ಅವರು ಟೆಂಡರ್ ಸಂಬಂಧಿತ ಕೆಲಸಕ್ಕಾಗಿ ಹೂವಿನಹಡಗಲಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ಲಾಡ್ಜ್‌ನ ಕೊಠಡಿಯಲ್ಲಿ ಅವರು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮಾಹಿತಿ ತಿಳಿದ ಕೂಡಲೇ ಹೂವಿನಹಡಗಲಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುತ್ತಿಗೆದಾರರ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆಯನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ : ಕರ್ನೂಲ್ ಬಸ್ ದುರಂತದ ಬಳಿಕ BMTC ಕಟ್ಟುನಿಟ್ಟಿನ ಕ್ರಮ – ಪ್ರಯಾಣಿಕರ ಸುರಕ್ಷತೆಗೆ ಮಹತ್ವದ ಸೂಚನೆ!

 

Btv Kannada
Author: Btv Kannada

Read More