ಸುಳ್ಳು ಸುದ್ದಿಗೆ ಬ್ರೇಕ್.. ಮಾ.19ಕ್ಕೆ ವಿಶ್ವದಾದ್ಯಂತ ‘ಟಾಕ್ಸಿಕ್’ ಸಿನಿಮಾ ರಿಲೀಸ್ – KVN ಪ್ರೊಡಕ್ಷನ್ಸ್ ಸ್ಪಷ್ಟನೆ!

ರಾಕಿಂಗ್ ಸ್ಟಾರ್ ಯಶ್ KGF ಬಳಿಕ ‘ಟಾಕ್ಸಿಕ್’ ಸಿನಿಮಾದ ಮೂಲಕ ತೆರೆ ಮೇಲೆ ಬರಲು ಸಿದ್ಧರಾಗಿದ್ದಾರೆ. ಈ ಮಧ್ಯೆ ‘ಟಾಕ್ಸಿಕ್’ ಸಿನಿಮಾ ರಿಲೀಸ್ ವಿಳಂಬವಾಗುತ್ತೆ ಎಂಬ ಸುದ್ದಿ ಹರಿದಾಡುತ್ತಿತ್ತು. ಸದ್ಯ ಈ ಸುಳ್ಳು ಸುದ್ದಿಗೆ ತೆರೆ ಬಿದ್ದಿದ್ದು, ಟಾಕ್ಸಿಕ್ 2026ರ ಮಾರ್ಚ್ 19ರಂದು ವಿಶ್ವದಾದ್ಯಂತ ರಿಲೀಸ್ ಆಗಲಿದೆ.

ಫಿಲಂ ಟ್ರೇಡ್ ಎನಾಲಿಸ್ಟ್ ತರಣ್ ಆದರ್ಶ್ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಬಳಿಕ ಯಾವುದೇ ವಿಳಂಬವಿಲ್ಲ ಎಂದು ಸಾಮಾಜಿಕ ಜಾಲತಾಣದ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಸಿನಿಮಾ ನಿರ್ಮಾಣ ತಂಡದೊಂದಿಗೆ ಮಾತನಾಡಿದ ನಂತರ, ಈಗಾಗಲೇ ಅನೌನ್ಸ್​ ಮಾಡಿದ ದಿನದಂದೇ ಚಿತ್ರ ಬಿಡುಗಡೆಯಾಗಲಿದೆ ಎಂದು ತರಣ್ ಸ್ಪಷ್ಟನೆ ಕೊಟ್ಟಿದ್ದಾರೆ.

ಯಶ್ ಮುಂಬೈನಲ್ಲಿ ರಾಮಾಯಣ ಚಿತ್ರೀಕರಣ ಪ್ರಾರಂಭಿಸಿದಂತೆಯೇ ಏಪ್ರಿಲ್‌ನಲ್ಲಿ ಪೋಸ್ಟ್-ಪ್ರೊಡಕ್ಷನ್ ಮತ್ತು ವಿಎಫ್‌ಎಕ್ಸ್ ಕೆಲಸಗಳು ಪ್ರಾರಂಭವಾಗಿವೆ. ಚಿತ್ರೀಕರಣದ ಅಂತಿಮ ಹಂತದ ಚಿತ್ರೀಕರಣವು ಪ್ರಸ್ತುತ ಬೆಂಗಳೂರಿನಲ್ಲಿ ನಡೆಯುತ್ತಿದೆ. ಪೂರ್ಣ ಪ್ರಮಾಣದ ಪ್ರಚಾರಗಳು ಜನವರಿ 2026 ರಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ. ಈ ಸ್ಪಷ್ಟನೆಯ ನಂತರ, ಚಿತ್ರದ ನಿರ್ಮಾಣ ಬ್ಯಾನರ್‌ಗಳಲ್ಲಿ ಒಂದಾದ ಕೆವಿಎನ್ ಪ್ರೊಡಕ್ಷನ್ಸ್ ಸೋಶಿಯಲ್ ಮೀಡಿಯಾದಲ್ಲಿ ಕೌಂಟ್‌ಡೌನ್ ಪೋಸ್ಟ್ ಅನ್ನು ಹಂಚಿಕೊಂಡಿದೆ. “140 days to go…His Untamed Presence, Is Your Existential Crisis. ToxicTheMovie releases worldwide on 19-03-2026” ಎಂದು ಪೋಸ್ಟ್​ ಹಂಚಿಕೊಂಡಿದೆ.

‘ಕೆಜಿಎಫ್ 2’ ಸಿನಿಮಾ ಬಳಿಕ ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದು, ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಗೀತು ಮೋಹನ್‌ದಾಸ್ ನಿರ್ದೇಶಿಸಿದ ಈ ಚಿತ್ರವನ್ನು ಇಂಗ್ಲಿಷ್ ಮತ್ತು ಕನ್ನಡದಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗಿದೆ. ಈ ಸಿನಿಮಾವನ್ನು ಹಿಂದಿ, ತೆಲುಗು, ತಮಿಳು, ಮಲಯಾಳಂ ಮತ್ತು ಇತರ ಭಾಷೆಗಳಲ್ಲಿಯೂ ಬಿಡುಗಡೆ ಮಾಡಲಾಗುವುದು. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಅಡಿಯಲ್ಲಿ ವೆಂಕಟ್ ಕೆ. ನಾರಾಯಣ ಮತ್ತು ಯಶ್ ಜಂಟಿಯಾಗಿ ನಿರ್ಮಿಸಿರುವ ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಹಬ್ಬದ ಸಂಭ್ರಮವನ್ನು ಹೆಚ್ಚಿಸಲು ರೆಡಿಯಾಗಿದೆ.

ಇದನ್ನೂ ಓದಿ : GBA ಎಫೆಕ್ಟ್​ಗೆ BBMP ನೌಕರಶಾಹಿ ತತ್ತರ – ಆಡಳಿತ ವ್ಯವಸ್ಥೆಯಲ್ಲಿ ತೀವ್ರ ಅವ್ಯವಸ್ಥೆ.. ಸಂಬಳವಿಲ್ಲದೆ ಸಂಕಷ್ಟದಲ್ಲಿ ಸಿಬ್ಬಂದಿಗಳು!

Btv Kannada
Author: Btv Kannada

Read More