ಮೈಸೂರು : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನ್ನ ಪತಿಯನ್ನೇ ಕೊಲೆ ಮಾಡಲು ಸ್ಕೆಚ್ ಹಾಕಿದ್ದ ಘಟನೆ ಮೈಸೂರಿನ ನಂಜನಗೂಡಿನಲ್ಲಿ ನಡೆದಿದೆ. ಪತ್ನಿ ಸಂಗೀತಾ ತನ್ನ ಸಹೋದರ ಸಂಜಯ್ ಮತ್ತು ಸ್ನೇಹಿತರಾದ ವಿಘ್ನೇಶ್ ಹಾಗೂ ಅಪ್ರಾಪ್ತ ಬಾಲಕನೊಂದಿಗೆ ಸೇರಿಕೊಂಡು ಪತಿ ರಾಜೇಂದ್ರ ಅವರ ಮೇಲೆ ಹಲ್ಲೆ ನಡೆಸಿದ್ದಾಳೆ.

ಹಲ್ಲೆಗೊಳಗಾದ ರಾಜೇಂದ್ರ ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಪ್ರಕರಣ ಸಂಬಂಧ ನಂಜನಗೂಡು ಪೊಲೀಸರು ತನಿಖೆ ನಡೆಸಿದ್ದು, ಘಟನೆ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಹಾಗೂ ಕೆಲವು ಪ್ರಮುಖ ತಾಂತ್ರಿಕ ಅಂಶಗಳನ್ನು ಆಧರಿಸಿ ತನಿಖೆ ನಡೆಸಿದಾಗ ಪತ್ನಿ ಸಂಗೀತಾಳ ಪ್ಲ್ಯಾನ್ ಬಯಲಾಗಿದೆ.

ಕಿಲಾಡಿ ಪತ್ನಿ ಸಂಗೀತಾ ಸೇರಿ ಆಕೆಯ ಸಹೋದರ ಸಂಜಯ್, ಸ್ನೇಹಿತ ವಿಘ್ನೇಶ್ ಮತ್ತು ಕೃತ್ಯದಲ್ಲಿ ಭಾಗಿಯಾಗಿದ್ದ ಓರ್ವ ಅಪ್ರಾಪ್ತ ಬಾಲಕನನ್ನು ಬಂಧಿಸಿದ್ದಾರೆ. ಈ ಸಂಬಂಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : GBA ಎಫೆಕ್ಟ್ಗೆ BBMP ನೌಕರಶಾಹಿ ತತ್ತರ – ಆಡಳಿತ ವ್ಯವಸ್ಥೆಯಲ್ಲಿ ತೀವ್ರ ಅವ್ಯವಸ್ಥೆ.. ಸಂಬಳವಿಲ್ಲದೆ ಸಂಕಷ್ಟದಲ್ಲಿ ಸಿಬ್ಬಂದಿಗಳು!







