Download Our App

Follow us

Home » ಸಿನಿಮಾ » ಟಾಕ್ಸಿಕ್ ಸಿನಿಮಾಗೆ ಸಂಕಷ್ಟ – ರಾಕಿಂಗ್ ಸ್ಟಾರ್ ಯಶ್ ನಟನೆಯ ಚಿತ್ರದ ವಿರುದ್ಧ ದೂರು..!

ಟಾಕ್ಸಿಕ್ ಸಿನಿಮಾಗೆ ಸಂಕಷ್ಟ – ರಾಕಿಂಗ್ ಸ್ಟಾರ್ ಯಶ್ ನಟನೆಯ ಚಿತ್ರದ ವಿರುದ್ಧ ದೂರು..!

ಪ್ಯಾನ್ ಇಂಡಿಯಾ ಸ್ಟಾರ್ ಯಶ್ ನಟಿಸುತ್ತಿರುವ ‘ಟಾಕ್ಸಿಕ್’ ಸಿನಿಮಾ ಕನ್ನಡ ಚಿತ್ರರಂಗದ ಅತ್ಯಂತ ನಿರೀಕ್ಷೆಯ ಸಿನಿಮಾ. ಈಗಾಗಲೇ ಸಿನಿಮಾದ ಶೂಟಿಂಗ್ ಕೂಡ ಭರದಿಂದ ಸಾಗಿದ್ದು, ಇದುವರೆಗೂ ಚಿತ್ರತಂಡ ಟೈಟಲ್ ಬಿಟ್ಟು ಬೇರೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಆದರೆ ಇದೀಗ ಏಕಾ ಏಕಿ ‘ಟಾಕ್ಸಿಕ್’ ಸಿನಿಮಾ ತಂಡದ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ.

ಹೌದು, ರಾಕಿಂಗ್ ಸ್ಟಾರ್ ಯಶ್ ನಟನೆಯ ,’ಟಾಕ್ಸಿಕ್’ ಚಿತ್ರೀಕರಣಕ್ಕಾಗಿ ಪೀಣ್ಯ ಪ್ಲಾಂಟೇಶನ್ ಜಮೀನಿನ ಬಳಿ ಸುಮಾರು 20 ಎಕರೆ ಜಾಗದಲ್ಲಿ ಬೃಹತ್ ಸೆಟ್ ನಿರ್ಮಿಸಲಾಗಿದೆ. ಆದರೆ ಈ ಸೆಟ್ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಹಾಕಲಾಗಿದೆ ಎಂದು ಆರೋಪಿಸಿ ವಕೀಲ ಜಿ.ಬಾಲಾಜಿ ನಾಯ್ಡುರಿಂದ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದಾರೆ.

ಅಕ್ರಮವಾಗಿ ನಿರ್ಮಿಸಲಾಗಿರುವ ಈ ಸೆಟ್​ ಅನ್ನು ಕೂಡಲೇ ತೆರವುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ವಕೀಲರು ಸಲ್ಲಿಕೆ ಮಾಡಿರುವ ಅರ್ಜಿ ವಿಚಾರಣೆಗೆ ಅರ್ಹವೆಂದು ಪರಿಗಣಿಸಿರುವ ಹೈಕೋರ್ಟ್ ‘ಟಾಕ್ಸಿಕ್’ ಸಿನಿಮಾದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಎಚ್​ಎಂಟಿ ಸಂಸ್ಥೆಗೆ ನೊಟೀಸ್ ನೀಡಿದೆ.

ಈಗ ಸೆಟ್ ನಿರ್ಮಾಣ ಮಾಡಲಾಗಿರುವ ಜಾಗವು ವಿವಾದದಿಂದ ಕೂಡಿದ್ದಾಗಿದೆ. ಕೆಲವು ದಾಖಲೆಗಳ ಪ್ರಕಾರ, ಎಚ್​ಎಂಟಿ ಸಂಸ್ಥೆಯು ಈ ಜಮೀನನ್ನು ಕೆನರಾ ಬ್ಯಾಂಕ್​ಗೆ ನೀಡಿತ್ತು. ಬಳಿಕ ಕೆನರಾ ಬ್ಯಾಂಕ್, ಕೆವಿಎನ್​ಗೆ ನೀಡಿತ್ತು. ಇದೀಗ ಕೆವಿಎನ್​ ನವರು 20.07 ಎಕರೆ ಜಾಗವನ್ನು ಸಿನಿಮಾ ಸೆಟ್ ನಿರ್ಮಾಣಕ್ಕೆ ಬಳಸಿಕೊಂಡಿದ್ದಾರೆ. ಆದರೆ ಇದು ಅರಣ್ಯ ಪ್ರದೇಶ ಎಂದು ಅರ್ಜಿದಾರರು ವಾದಿಸಿದ್ದಾರೆ. ವಿಚಾರಣೆ ಬಳಿಕವೇ ಸತ್ಯಾಂಶ ಹೊರಬರಲಿದೆ.

ಟಾಕ್ಸಿಕ್’ ಚಿತ್ರವನ್ನು ಕೆವಿಎನ್ ಸಂಸ್ಥೆ ನಿರ್ಮಾಣ ಮಾಡಿದ್ದು, ಮಲಯಾಳಂ ನಿರ್ದೇಶಕಿ ಗೀತು ಮೋಹನ್ ದಾಸ್ ನಿರ್ದೇಶಿಸಿದ್ದಾರೆ. ಯಶ್​​ ಜೊತೆ ಈ ಸಿನಿಮಾದಲ್ಲಿ ಯಾವೆಲ್ಲ ಕಲಾವಿದರು ನಟಿಸಲಿದ್ದಾರೆ ಎಂಬ ಕೌತುಕ ಎಲ್ಲರಿಗೂ ಇದೆ. ಈಗಾಗಲೇ ಕೆಲವು ನಟಿಯರ ಹೆಸರುಗಳು ಹರಿದಾಡುತ್ತಿವೆ. ನಯನತಾರಾ, ಕಿಯಾರಾ ಅಡ್ವಾಣಿ ಮಾತ್ರವಲ್ಲದೇ ಇನ್ನೂ ಹಲವು ನಟಿಯರು ಈ ಸಿನಿಮಾದಲ್ಲಿ ಇರಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : KRS ಡ್ಯಾಂನಿಂದ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ‌ – ಕಾವೇರಿ ನದಿ ಪಾತ್ರದಲ್ಲಿ ಮತ್ತಷ್ಟು ಹೆಚ್ಚಾದ ಆತಂಕ..!

 

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here