ಕರ್ನಾಟಕ ಸರ್ಕಾರದ ಮಹತ್ವದ ಸಮೀಕ್ಷೆ: ಸ್ವಯಂ ಪಾಲ್ಗೊಳ್ಳುವ ಅವಧಿ ವಿಸ್ತರಣೆ!

ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಎಲ್ಲ ವರ್ಗಗಳ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ರ ಸ್ವಯಂ ಪಾಲ್ಗೊಳ್ಳುವಿಕೆಯ (Online Self-Declaration) ಅವಧಿಯನ್ನು ವಿಸ್ತರಿಸಿದೆ.

ವಿವಿಧ ಕಾರಣಗಳಿಂದ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ ಮತ್ತೊಂದು ಅವಕಾಶ ನೀಡುವ ಸಲುವಾಗಿ, ಆಯೋಗವು ಆನ್‌ಲೈನ್ ಮೂಲಕ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ದಿನಾಂಕ: 10.11.2025 ರ ವರೆಗೆ ವಿಸ್ತರಿಸಿದೆ. ಇದು ಸಮೀಕ್ಷೆಯಲ್ಲಿ ಭಾಗವಹಿಸಲು ಅಂತಿಮ ಅವಕಾಶವಾಗಿದೆ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಸಾರ್ವಜನಿಕರು ಆಯೋಗದ ಅಧಿಕೃತ ವೆಬ್‌ಸೈಟ್‌ ಆದ https://kscbcselfdeclaration.karnataka.gov.in/ ಮೂಲಕ ತಮ್ಮ ಮಾಹಿತಿಯನ್ನು ಸ್ವತಃ ಭರ್ತಿ ಮಾಡುವ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.

ಇದನ್ನೂ ಓದಿ : 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ – ವಿವಿಧ ಕ್ಷೇತ್ರಗಳ 70 ಮಂದಿ ಸಾಧಕರಿಗೆ ರಾಜ್ಯೋತ್ಸವ ಗೌರವ

Btv Kannada
Author: Btv Kannada

Read More