ಸ್ಯಾಂಡಲ್ವುಡ್ನ ಹೆಮ್ಮೆಯ ಚಿತ್ರ `ಕಾಂತಾರ ಚಾಪ್ಟರ್ 1′ ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ವಿಶ್ವದಾದ್ಯಂತ ಅಪಾರ ಮೆಚ್ಚುಗೆಯನ್ನ ಪಡೆದುಕೊಳ್ಳುತ್ತಿದೆ. ಕಾಂತಾರ ಸಿನಿಮಾ ತೆರೆಕಂಡು ಅಭೂತಪೂರ್ವ ಯಶಸ್ಸು ಪಡೆದುಕೊಳ್ಳುತ್ತಿದೆ. ಜೊತೆಗೆ ಬಾಕ್ಸಾಫೀಸ್‌ನಲ್ಲೂ ಕಮಾಲ್ ಮಾಡುತ್ತಿದೆ.

ಕಾಂತಾರ ಚಾಪ್ಟರ್-1 ಬಿಡುಗಡೆಯಾದ 4 ವಾರಕ್ಕೆ ಕರ್ನಾಟಕದಲ್ಲಿ 250 ಕೋಟಿಗೂ ಅಧಿಕ ಗಳಿಕೆಯಾಗಿದೆ. ಈ ಮೂಲಕ ಕರ್ನಾಟಕದ ಚಲನಚಿತ್ರ ಇತಿಹಾಸದಲ್ಲಿ 200 ಕೋಟಿಗೂ ಹೆಚ್ಚು ಗಳಿಕೆ ಕಂಡ ಏಕೈಕ ಚಿತ್ರ ‘ಕಾಂತಾರ ಚಾಪ್ಟರ್ 1’ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ. ಇನ್ನು ವಿಶ್ವದಾದ್ಯಂತ ಕಾಂತಾರ ಸಿನಿಮಾ 867 ಕೋಟಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಹುಬ್ಬೇರಿಸುವಂತೆ ಮಾಡಿದೆ.

ಬಹು ತಾರಾಗಣದ ಈ ಚಿತ್ರ ಅಕ್ಟೋಬರ್ 2ರಂದು ವಿಶ್ವದಾದ್ಯಂತ 30+ ದೇಶಗಳಲ್ಲಿ ಬಿಡುಗಡೆ ಆಗಿದೆ. ಒಟಿಟಿ ರಿಲೀಸ್ ಡೇಟ್ ಅನೌನ್ಸ್ ಆಗಿದ್ದು, ಚಿತ್ರಮಂದಿರಗಳಲ್ಲೂ ಉತ್ತಮ ಪ್ರದರ್ಶನ ಮುಂದುವರಿಸಿದೆ. ಈ ಯಶಸ್ವಿ ಸಿನಿಮಾ ಇಂದು ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿದೆ.
ಸಿನಿಮಾ ಬಿಡುಗಡೆ ಆಗಿ ತಿಂಗಳಾದರೂ ಚಿತ್ರಮಂದಿರಗಳಿಗೆ ಪ್ರೇಕ್ಷಕರನ್ನು ಸೆಳೆಯುತ್ತಲೇ ಇದೆ. ಜೊತೆಗೆ ಈ ಸಾಲಿನ ಬ್ಲಾಕ್ಬಸ್ಟರ್ ಛಾವಾ ಸಿನಿಮಾವನ್ನೂ ಹಿಂದಿಕ್ಕೆ, ಅತಿ ಹೆಚ್ಚು ಕಲೆಕ್ಷನ್ ಮಾಡಿದ 2025ರ ಭಾರತೀಯ ಸಿನಿಮಾ ಆಗಿ ಹೊರಹೊಮ್ಮಿದೆ. ಬಾಕ್ಸ್ ಆಫೀಸ್ ಅಂಕಿ – ಅಂಶ ಇನ್ನೂ ಕೋಟಿ ಲೆಕ್ಕದಲ್ಲಿರೋದು ಹೆಮ್ಮೆಯ ವಿಷಯ.
ಇದನ್ನೂ ಓದಿ : ಕಂದಾಯ ನಿರೀಕ್ಷಕ NI ಹಡಗಲಿಮಠನಿಂದ ಯಡವಟ್ಟು – ಗದಗ ಡಿಸಿ, ತಹಶೀಲ್ದಾರ್ಗೆ ಪೇಚಾಟ!







