Download Our App

Follow us

Home » ಕ್ರೀಡೆ » ಮಹಿಳಾ ಏಷ್ಯಾಕಪ್ : ಬಾಂಗ್ಲಾವನ್ನು ಮಣಿಸಿ ಫೈನಲ್‌ ಪ್ರವೇಶಿಸಿದ ಭಾರತ..!

ಮಹಿಳಾ ಏಷ್ಯಾಕಪ್ : ಬಾಂಗ್ಲಾವನ್ನು ಮಣಿಸಿ ಫೈನಲ್‌ ಪ್ರವೇಶಿಸಿದ ಭಾರತ..!

ಶ್ರೀಲಂಕಾ : ಇಂದು ಶ್ರೀಲಂಕಾದ ದಂಬುಲ್ಲಾ ರಂಗಿರಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮಹಿಳಾ ಏಷ್ಯಾಕಪ್ 2024ರ ಸೆಮಿಫೈನಲ್ ಪಂದ್ಯದಲ್ಲಿ ಹರ್ಮನ್​ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ತಂಡ, ಬಾಂಗ್ಲಾದೇಶ ತಂಡವನ್ನು ಬರೋಬ್ಬರಿ 10 ವಿಕೆಟ್​ಗಳಿಂದ ಮಣಿಸಿ ಅಜೇಯ ತಂಡವಾಗಿ ಫೈನಲ್ ಪ್ರವೇಶಿಸಿದೆ. ಸ್ಮೃತಿ ಮಂಧಾನ ಅಜೇಯ ಅರ್ಧಶತಕ ಮತ್ತು ಶಫಾಲಿ ವರ್ಮಾ ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ ಭಾರತ 10 ವಿಕೆಟ್‌ಗಳ ಸುಲಭ ಗೆಲುವು ಸಾಧಿಸಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ನಿಗದಿತ ಓವರ್​​​ನಲ್ಲಿ 8 ವಿಕೆಟ್ ನಷ್ಟಕ್ಕೆ 80 ರನ್ ಬಾರಿಸಿತ್ತು. ಬಾಂಗ್ಲಾ ನೀಡಿದ 81 ರನ್​​ಗಳ ಗುರಿ ಬೆನ್ನಟ್ಟಿದ ಭಾರತ ತಂಡ 11 ಓವರ್ ಗಳ ಮುಕ್ತಾಯಕ್ಕೆ ವಿಕೆಟ್ ನಷ್ಟವಿಲ್ಲದೆ 83 ರನ್ ಬಾರಿಸಿ ಗೆಲುವಿನ ನಗೆ ಬೀರಿತು.

ಭಾರತದ ಪರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ಸ್ಮೃತಿ ಮಂದಾನ ಅಜೇಯ 55 ಮತ್ತು ಶೆಫಾಲಿ ವರ್ಮಾ ಅಜೇಯ 26 ರನ್ ಬಾರಿಸಿ ತಂಡಕ್ಕೆ 10 ವಿಕೆಟ್ ಗಳಿಂದ ಅಮೋಘ ಗೆಲುವು ತಂದುಕೊಟ್ಟರು.

ಏಷ್ಯಾಕಪ್ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿದ್ದು, ಆ ಪಂದ್ಯದಲ್ಲಿ ಗೆದ್ದವರ ಜೊತೆ ಭಾರತ ಫೈನಲ್ ಪಂದ್ಯದಲ್ಲಿ ಸೆಣೆಸಲಿದೆ.

ಇದನ್ನೂ ಓದಿ : ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ – ಸಿಎಂ ಸಿದ್ದು ನೇತೃತ್ವದ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here