ಬೆಂಗಳೂರು : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸಾಗಾಟ ಮಾಡುತ್ತಿರೋ ಗಂಭೀರ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಮೆಜೆಸ್ಟಿಕ್ನಲ್ಲಿ ಮಾಂಸದ ಬಾಕ್ಸ್ಗಳನ್ನು ತುಂಬಿರುವ ವಾಹನವನ್ನು ತಡೆದು ನಿನ್ನೆ ರಾತ್ರಿ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ನೇತೃತ್ವದ ತಂಡ ಭಾರೀ ಹೈಡ್ರಾಮಾ ಸೃಷ್ಟಿಸಿತ್ತು.
ಬಳಿಕ ಮಾಂಸ ಮಾರಾಟ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕಾಟನ್ ಪೇಟೆ ಠಾಣೆ ಪೊಲೀಸರು ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಮಧ್ಯರಾತ್ರಿ 12 ಗಂಟೆಗೆ ಬಂಧಿಸಿದ್ದರು.
ಬಂಧನದ ಬಳಿಕ ಠಾಣೆಯಲ್ಲಿ ಮಲಗಿದ್ದಾಗ ಪುನೀತ್ ಕೆರೆಹಳ್ಳಿ ಅಸ್ವಸ್ಥರಾಗಿದ್ದಾರೆ. ತೀವ್ರ ಅಸ್ವಸ್ಥಗೊಂಡ ಕಾರಣ ಅವರನ್ನು ಕೆ.ಸಿ. ಜನರಲ್ ಆಸ್ಪತ್ರೆಗೆ ಪೊಲೀಸರು ಇಂದು ಬೆಳಗಿನ ಜಾವ 4.45ರ ಸುಮಾರಿಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು.
ಇದೀಗ ಕೆಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಪುನೀತ್ ಕೆರೆಹಳ್ಳಿಯನ್ನು ದಾಖಲಿಸಲಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪುನೀತ್ನನ್ನು ವ್ಹೀಲ್ ಚೇರ್ ಮೂಲಕ ಬೆಳಗಿನ ಜಾವ ಕೆ.ಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.