Download Our App

Follow us

Home » ಅಪರಾಧ » ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ.

ಜು.23 ರಂದು ಕೋರಮಂಗಲದ ಪಿಜಿಯಲ್ಲಿ ಕೃತಿ ಕುಮಾರಿ ಎಂಬ ಯುವತಿಯ ಭೀಕರ ಕೊಲೆ ನಡೆದಿತ್ತು. ರಾತ್ರಿ 11:13 ನಿಮಿಷಕ್ಕೆ ಆರೋಪಿ ಅಭಿಷೇಕ್ ಪಿಜಿಗೆ ಬಂದು ಕೃತಿ ಕುಮಾರಿ ಇದ್ದ ರೂಮ್ ಬಾಗಿಲು ಬಡಿದು ಆಕೆ ಬಾಗಿಲು ಓಪನ್ ಮಾಡುತ್ತಿದ್ದಂತೆ ಚಾಕುವಿನಿಂದ ಮನಬಂದಂತೆ ಇರಿದು ಕೃತಿ ಕುಮಾರಿಯ ಹತ್ಯೆ ಮಾಡಿದ್ದ. ಕೃತಿ ಕುಮಾರಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ರೂ, ಬಿಡದೇ ಹಲವು ಬಾರಿ ಚಾಕುವಿನಿಂದ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ.

ಬಳಿಕ ಕೋರಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಅಭಿಷೇಕ್​ಗಾಗಿ ಹುಡುಕಾಟ ಆರಂಭಿಸಿದ್ದರು. ಕೊಲೆ ಮಾಡಿದ ಬಳಿಕ ಆರೋಪಿ ಅಭಿಷೇಕ್ ಬಟ್ಟೆ ಬದಲಿಸಿಕೊಂಡು ಪರಾರಿಯಾಗಿದ್ದ. ತನಿಖೆ ವೇಳೆ ಅಭಿಷೇಕ್ ಭೂಪಾಲ್​ಗೆ ಪರಾರಿಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿತ್ತು.

ಇದೀಗ ಕೋರಮಂಗಲ ಪೊಲೀಸರು ಭೂಪಾಲ್​ಗೆ ತೆರಳಿ ಆರೋಪಿ ಅಭಿಷೇಕ್​ನನ್ನು ಬಂಧಿಸಿದ್ದಾರೆ. ನಿನ್ನೆ ಆರೋಪಿ ಅಭಿಷೇಕ್​ನನ್ನು ಬಂಧಿಸಿದ ಬೆಂಗಳೂರು ಪೊಲೀಸರು, ಬಳಿಕ ಸ್ಥಳೀಯ ಕೋರ್ಟ್​ಗೆ ಹಾಜರುಪಡಿಸಿ ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರಿಗೆ ಕರೆತಂದಿದ್ದಾರೆ.

ಇದನ್ನೂ ಓದಿ : ಬಂಧಿತ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥ.. ಕೆಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here