ಹಾವೇರಿ : ಶಹರ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಾವೇರಿಯ ನಾಗೇಂದ್ರನಮಟ್ಟಿಯಿಂದ ಶಾಂತಿನಗರಕ್ಕೆ ಹೋಗುವ ರಸ್ತೆ ಬದಿಯಲ್ಲಿ ಆರೋಪಿಗಳು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದರು. ಅಕ್ರಮವಾಗಿ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಕುರಿತು ಖಚಿತ ಮಾಹಿತಿ ಪಡೆದು ಕಾರ್ಯಚರಣೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಸವಣೂರಿನ ಮಲಿಕ್ ರೆಹಾನ, ರಿಯಾಜ್ ಅಹ್ಮದ ಬಕ್ರಿಯಾವಾಲೆ, ಪುರಖಾನ ಬಾಬಾಜಾನ ಪಟವೆಗಾರ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಬಂಧಿತರಿಂದ 2,96,075 ರೂ ಮೌಲ್ಯದ 11 KG 843 ಗ್ರಾಂ ನಿಷೇಧಿತ ಮಾದಕ ವಸ್ತು ಗಾಂಜಾ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬೆಂಗಳೂರು ದಕ್ಷಿಣ ಘೋಷಣೆ ಬೆನ್ನಲ್ಲೇ ಇಂದು ಮಹತ್ವದ ಸಭೆ ಕರೆದ ಡಿಸಿಎಂ ಡಿಕೆಶಿ..!
Post Views: 23