ಪ್ಯಾರಿಸ್ : ಪ್ಯಾರಿಸ್ ಒಲಂಪಿಕ್ಸ್-2024 ಕ್ರೀಡಾಕೂಟದಲ್ಲಿ ಭಾರತ ಮೊದಲ ಪದಕ ಗೆದ್ದು ಐತಿಹಾಸಿಕ ದಾಖಲೆ ನಿರ್ಮಿಸಿದೆ. ಪ್ಯಾರಿಸ್ ಒಲಂಪಿಕ್ಸ್ನ ಮಹಿಳೆಯರ 10 ಮೀ. ಏರ್ ಪಿಸ್ತೂಲ್ನಲ್ಲಿ ಭಾರತದ ಮನು ಭಾಕರ್ ಕಂಚಿನ ಪದಕ ಗೆದ್ದಿದ್ದಾರೆ. ಶೂಟಿಂಗ್ ಸ್ಪರ್ಧೆಯಲ್ಲಿ ಪದಕ ಪಡೆದ ಪ್ರಪ್ರಥಮ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೂ ಕೂಡ ಮನು ಪಾತ್ರರಾಗಿದ್ದಾರೆ.
22 ವರ್ಷದ ಮನು ಭಾಕರ್ 10 ಮೀಟರ್ ಏರ್ ಪಿಸ್ತೂಲ್ನಲ್ಲಿ 221.7 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದಿದ್ದು, ಕಂಚಿನ ಪದಕ ಗೆದ್ದಿದ್ದಾರೆ. ಇನ್ನು ದಕ್ಷಿಣ ಕೊರಿಯಾದ ವೈಜೆ ಓ 243.2 ಅಂಕಗಳೊಂದಿಗೆ ಚಿನ್ನದ ಪದಕಕ್ಕೆ ಮುತ್ತಿಟ್ಟರೆ, ದಕ್ಷಿಣ ಕೊರಿಯಾದ ವೈಜೆ ಕಿಮ್ 241.3 ಅಂಕಗಳೊಂದಿಗೆ ಬೆಳ್ಳಿ ಪದಕ ಗೆದ್ದಿದ್ದಾರೆ. ಇದೀಗ ಒಲಿಂಪಿಕ್ಸ್ ಆರಂಭದಲ್ಲಿಯೇ ಮನು ಭಾಕರ್ ಮೊದಲ ಪದಕ ಗೆಲ್ಲುವ ಮೂಲಕ ಭಾರತೀಯ ಕ್ರೀಡಾಪಟುಗಳಿಗೆ ಭರವಸೆಯನ್ನು ಮೂಡಿಸಿದ್ದಾರೆ.
ಈಗ ಕಳೆದ 20 ವರ್ಷಗಳಲ್ಲಿ ವೈಯಕ್ತಿಕ ಸ್ಪರ್ಧೆಯಲ್ಲಿ ಒಲಿಂಪಿಕ್ ಫೈನಲ್ ತಲುಪಿದ ಮೊದಲ ಭಾರತೀಯ ವನಿತಾ ಶೂಟರ್ ಆಗಿದ್ದರು. 2004ರಲ್ಲಿ ಅಥೆನ್ಸ್ನಲ್ಲಿ ನಡೆದ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಸುಮಾ ಶಿರೂರ್ ಕೊನೆಯ ಬಾರಿಗೆ ಫೈನಲ್ ತಲುಪಿದ್ದರು.
ಇದನ್ನೂ ಓದಿ : ವಾಲ್ಮೀಕಿ ಹಗರಣದಲ್ಲಿ ಬ್ಯಾಂಕಿನವರು ತಪ್ಪು ಮಾಡಿದ್ರೂ ಬಿಡಲ್ಲ- ಸಿಎಂ ಸಿದ್ದು ಆರೋಪಕ್ಕೆ ನಿರ್ಮಲಾ ಸೀತಾರಾಮನ್ ರಿಯಾಕ್ಷನ್..!