ಬಾಗಲಕೋಟೆ : ಕೃಷ್ಣಾ ನದಿಯ ಹಿನ್ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಜಿಲ್ಲೆಯ ಜಮಖಂಡಿ ತಾಲೂಕಿನ ಕಡಕೋಳ ಗ್ರಾಮದಲ್ಲಿ ನಿನ್ನೆ(ಭಾನುವಾರ) ಈ ಘಟನೆ ನಡೆದಿದ್ದು, ಸಮೃದ್ಧಿ ತಿಮ್ಮಪ್ಪನವರ್ (4) ಮೃತ ಬಾಲಕಿ ಎಂದು ತಿಳಿದುಬಂದಿದೆ.
ಬಾಲಕಿ ಹಿನ್ನೀರಿನ ಕಡೆ ಹೋಗುವ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಬಾಲಕಿ ಆಟವಾಡಲು ಹೋಗಿ ಕೃಷ್ಣಾ ನದಿ ಪಾಲಾಗಿದ್ದಳೆ ಎಂದು ಶಂಕೆ ವ್ಯಕ್ತವಾಗದ ಬೆನ್ನಲ್ಲೇ ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯ ಆರಂಭಿಸಿದ್ದರು. ಶೋಧಕಾರ್ಯಕ್ಕೆ ಸ್ಥಳೀಯ ಮೀನುಗಾರರು ಕೂಡ ಸಾಥ್ ಕೊಟ್ಟಿದ್ದರು.
ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ಹಿನ್ನೀರಿನಿಂದ ಸಮೃದ್ಧಿ ಮೃತದೇಹ ಹೊರತೆಗೆದಿದ್ದಾರೆ. ಸಮೃದ್ಧಿ ಶವ ಸಿಗುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ತಹಶೀಲ್ದಾರ ಸದಾಶಿವ ಮುಕ್ಕೋಜಿ, ಜಮಖಂಡಿ ಗ್ರಾಮಿಣ ಠಾಣೆಯ ಪಿ.ಎಸ್.ಐ ಎಚ್.ಎಮ್. ಹೊಸಮನಿ ಸೇರಿದಂತೆ ವಿವಿಧ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಮಖಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ : ಲಂಕಾ ವಿರುದ್ಧ ಸೂರ್ಯ ಪಡೆಗೆ ಭರ್ಜರಿ ಜಯ : 2-0 ಅಂತರದಿಂದ ಟಿ20 ಸರಣಿ ವಶಪಡಿಸಿಕೊಂಡ ಭಾರತ..!