ಸಾವಿನಲ್ಲೂ ಒಂದಾದ ದಂಪತಿ – ಪತಿಯ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಪತ್ನಿ ಸಾವು!

ಬಾಗಲಕೋಟೆ : ಗಂಡ-ಹೆಂಡತಿ ಸಾವಿನಲ್ಲೂ ಒಂದಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ‌ ನಡೆದಿದೆ. ಶಶಿಧರ (40), ಸರೋಜಾ(35) ಮೃತ ದಂಪತಿ.

ಶಶಿಧರ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಗಂಡನ ಸಾವಿನ ಸುದ್ದಿ ಕೇಳಿ ಮನೆಯಲ್ಲಿ ಹೃದಯಾಘಾತದಿಂದ ಸರೋಜಾ ಸಾವನ್ನಪ್ಪಿದ್ದಾರೆ. ಈ ದಂಪತಿಗೆ ಹದಿನೈದು ವರ್ಷದ ಹಿಂದೆ ಮದುವೆಯಾಗಿತ್ತು. ಮೃತರಿಗೆ ಇಬ್ಬರು ಮಕ್ಕಳಿದ್ದಾರೆ. ಇದೀಗ ಗಂಡ-ಹೆಂಡತಿ ಇಬ್ಬರೂ ಮೃತಪಟ್ಟಿದ್ದು, ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದೆ.

ಇದನ್ನೂ ಓದಿ : ಪಾರಿವಾಳಗಳ ಸಂಖ್ಯೆ ವಿಪರೀತ ಹೆಚ್ಚಳದಿಂದ ಶ್ವಾಸಕೋಶದ ಸಮಸ್ಯೆ ಹೆಚ್ಚಳ – ಶಾಸಕ ಸುರೇಶ್ ಕುಮಾರ್ ಪತ್ರ!

Btv Kannada
Author: Btv Kannada

Read More