ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ – ಆತಂಕದಿಂದ ಕಣ್ಣೀರಿಟ್ಟ ಪ್ರಯಾಣಿಕರು!

ಹುಬ್ಬಳ್ಳಿ: ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಹಾದುರಂತವೊಂದು ತಪ್ಪಿದ್ದು, ನೂರಾರು ಪ್ರಯಾಣಿಕರು ಬದುಕುಳಿದಿದ್ದಾರೆ. ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ ಸುಮಾರು 4 ಗಂಟೆಗಳ ಆಕಾಶದಲ್ಲಿ ಸುತ್ತಿದೆ. ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಬಚಾವ್​​ ಆಗಿದ್ದಾರೆ.

Fly91 ಏರ್‌ಲೈನ್ಸ್ IC3401( ATRTURBOPROP AT7) ಸಂಖ್ಯೆ ಫ್ಲೈಟ್‌ ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿತ್ತು. ನಿನ್ನೆ ಮಧ್ಯಾಹ್ನ 3 ಗಂಟೆ ಹೈದರಾಬಾದ್ ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ವಿಮಾನ ನಿಲ್ದಾಣದಿಂದ ಟೇಕಾಫ್‌ ಆಗಿತ್ತು. ಸಂಜೆ 4:30 ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ, ಹುಬ್ಬಳ್ಳಿ ಸಮೀಪಿಸುತ್ತಿದ್ದಂತೆ ಏಕಾಏಕಿ ತಾಂತ್ರಿಕ ದೋಷದಿಂದ ವಿಮಾನ ನಿಯಂತ್ರಣ ಕಳೆದುಕೊಂಡಿತು.

ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗದೇ ಸುಮಾರು ನಾಲ್ಕು ಗಂಟೆ ಆಗಸದಲ್ಲಿಯೇ ಮುಂಡಗೋಡ, ದಾವಣಗೆರೆ, ಶಿವಮೊಗ್ಗದಲ್ಲಿ ಸುತ್ತಾಟ ನಡೆಸಿದೆ. ಎಲ್ಲಿಯೂ ಫ್ಲೈಟ್‌ ಲ್ಯಾಂಡ್‌ ಆಗಲಿಲ್ಲ. ಕೊನೆಗೆ ಸಂಜೆ 7:30 ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್‌ ಆಗಿದೆ.

ಇದ್ರಿಂದ ಕಂಗಾಲಾದ ಪ್ರಯಾಣಿಕರು, ಫ್ಲೈಟ್​ನಲ್ಲಿಯೇ ದೇವರಿಗೆ ಕೈಮುಗಿದು ಬೇಡಿಕೊಂಡು ಕಣ್ಣಿರು ಹಾಕಿದ್ದಾರೆ. ನಾವು ಜೀವಂತವಾಗಿ ಬರೋದು ಅನುಮಾನ ಅಂತ ಕುಟುಂಬಸ್ಥರಿಗೆ ಮೊಬೈಲ್ ನಲ್ಲಿ ಸಂದೇಶ ಕಳುಹಿಸಿದ ಪ್ರಯಾಣಿಕರು ಅಳುತ್ತಿರೋ ವಿಡಿಯೋ ಕೂಡ ಸಿಕ್ಕಿದೆ.

Btv Kannada
Author: Btv Kannada

Leave a Comment

Read More