Download Our App

Follow us

Home » ಅಪರಾಧ » ಜೈಲೂಟ ಸೇರುತ್ತಿಲ್ಲ, ಮನೆ ಊಟಕ್ಕೆ ಅವಕಾಶ ಕೊಡಿ – ಜೈಲು ಮಹಾ ನಿರ್ದೇಶಕರಿಗೆ ಪತ್ರ ಬರೆದ ದರ್ಶನ್..!

ಜೈಲೂಟ ಸೇರುತ್ತಿಲ್ಲ, ಮನೆ ಊಟಕ್ಕೆ ಅವಕಾಶ ಕೊಡಿ – ಜೈಲು ಮಹಾ ನಿರ್ದೇಶಕರಿಗೆ ಪತ್ರ ಬರೆದ ದರ್ಶನ್..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್​ ಜೈಲು ಊಟಕ್ಕಾಗಿ ಮತ್ತೊಮ್ಮೆ ಮನವಿ ಮಾಡಿದ್ದಾರೆ. ಈ ಹಿಂದೆ ಮನೆ ಊಟ ತರಿಸಿಕೊಳ್ಳಲು ಅನುಮತಿ ಕೋರಿ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ ಆ ಅರ್ಜಿಯು ಹೈಕೋರ್ಟ್​ನಿಂದ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಬಂದು ಅಲ್ಲಿ ವಜಾ ಆಗಿತ್ತು.

ಬಳಿಕ ತಾಂತ್ರಿಕ ಕಾರಣ ನೀಡಿ ವಕೀಲರು ದರ್ಶನ್​ರ ಅರ್ಜಿಯನ್ನು ಹಿಂಪಡೆದಿದ್ದರು. ಈಗ ದರ್ಶನ್ ಮತ್ತೊಮ್ಮೆ ಮನೆ ಊಟಕ್ಕಾಗಿ ಮನವಿ ಸಲ್ಲಿಸಿದ್ದು, ಈ ಬಾರಿ ಜೈಲು ಮಹಾ ನಿರ್ದೇಶಕರಿಗೆ ಮತ್ತು ಜೈಲಿನ ವೈದ್ಯಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಜೈಲು ವೈದ್ಯಾಧಿಕಾರಿ, ಕಾರಾಗೃಹ ಎಡಿಜಿಪಿಗೆ ಪತ್ರ ಬರೆದಿರುವ ನಟ ದರ್ಶನ್, ತಮಗೆ ಮನೆ ಊಟ ತರಿಸಿಕೊಳ್ಳಲು ಅನುಮತಿ ಕೊಡುವಂತೆ ಮನವಿ ಸಲ್ಲಿಸಿದ್ದಾರೆ. “ಜೂನ್ 22ರಂದು ನಾನು ಕೇಂದ್ರ ಕಾರಾಗೃಕಹಕ್ಕೆ ಬಂದಿದ್ದು, ನಾನು ದಿನನಿತ್ಯ ನನ್ನ ಮನೆಯಲ್ಲಿದ್ದಾಗ ವ್ಯಾಯಾಮ ಮಾಡುತ್ತಿದ್ದೆ ಅದರ ಜೊತೆ ಪೌಷ್ಟಿಕ (ಪ್ರೋಟಿನ್) ಆಹಾರ ಸೇವಿಸುತ್ತಿದ್ದೆ ಮತ್ತು ದಿನನಿತ್ಯ ಪೌಷಷ್ಟಿಕ ಆಹಾರ ತಿನ್ನುತ್ತಿದೆ.

ಕೇಂದ್ರ ಕಾರಾಗೃಹದಲ್ಲಿ ನನಗೆ ಬೇಕಾದ ಆಹಾರ ಕೊರತೆ ಇದ್ದು, ನನ್ನ ದೇಹದ ತೂಕದಲ್ಲಿ ಸುಮಾರು ಹತ್ತು ಕೆಜಿಯಷ್ಟು ಇಳಿದಿದೆ. ಆದ ಕಾರಣ ನನಗೆ ಮನೆ ಊಟದ ವ್ಯವಸ್ಥೆ ಮಾಡಿಕೊಡಬೇಕಾಗಿ ತಮ್ಮಲ್ಲಿ ಕೋರಿ ಕೊಳ್ಳುತ್ತೇನೆ” ಎಂದು ಪತ್ರದಲ್ಲಿ ನಟ ದರ್ಶನ್ ಉಲ್ಲೇಖಿಸಿದ್ದಾರೆ. ಜೈಲು ವೈದ್ಯಾಧಿಕಾರಿಗಳು ಜಾಗೂ ಜೈಲು ಮಹಾ ನಿರ್ದೇಶಕರನ್ನು ಉದ್ದೇಶಿಸಿ ಈ ಪತ್ರವನ್ನು ಬರೆಯಲಾಗಿದೆ. ಜುಲೈ 10ರಂದು ಬರೆದಿರುವ ಪತ್ರ ಈಗ ವೈರಲ್ ಅಗುತ್ತಿದೆ.

ಇದನ್ನೂ ಓದಿ : ತುಮಕೂರು : ಮನೆ ಬೀಗ ಮುರಿದು 6 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದ ಕಳ್ಳರು..!

Leave a Comment

DG Ad

RELATED LATEST NEWS

Top Headlines

ನಕಲಿ ನಕ್ಷೆ ಸೃಷ್ಟಿಸಿ ಕಟ್ಟಡ ನಿರ್ಮಾಣ – ಮಾಲೀಕನ ವಿರುದ್ಧ FIR ದಾಖಲು..!

ಬೆಂಗಳೂರು : ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ದುರಂತದ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ನಕಲಿ ನಕ್ಷೆ ತಯಾರಿಸಿ ಕಟ್ಟಡ ನಿರ್ಮಿಸಿರುವ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ರಾಜರಾಜೇಶ್ವರಿನಗರ

Live Cricket

Add Your Heading Text Here