Download Our App

Follow us

Home » ರಾಜ್ಯ » ವಯನಾಡು ಭೂಕುಸಿತ ದುರಂತದಲ್ಲಿ ಕರ್ನಾಟಕದ ನಾಲ್ವರು ಸಾವು, ಹಲವರು ನಾಪತ್ತೆ..!

ವಯನಾಡು ಭೂಕುಸಿತ ದುರಂತದಲ್ಲಿ ಕರ್ನಾಟಕದ ನಾಲ್ವರು ಸಾವು, ಹಲವರು ನಾಪತ್ತೆ..!

ಕೇರಳ : ದೇವರನಾಡು ಕೇರಳದಲ್ಲಿ ವರುಣನ ರಣಾರ್ಭಟಕ್ಕೆ ಸಂಭವಿಸಿದ ಭಾರೀ ಭೂಕುಸಿತ ಕಂಡು ಇಡೀ ದೇಶವೇ ಬೆಚ್ಚಿ ಬಿದ್ದಿದೆ. ಒಂದೇ ರಾತ್ರಿಯಲ್ಲಿ ಇಡೀ ಊರಿಗೇ ಊರೇ ಸಮಾಧಿಯಾಗಿದ್ದು, ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ. ಈ ಮಹಾ ದುರಂತದಲ್ಲಿ ಇದುವರೆಗೂ 145ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅದರಲ್ಲೂ ಕೇರಳದಲ್ಲಿ ಬದುಕು ಕಟ್ಟಿಕೊಂಡಿದ್ದ ಕರ್ನಾಟಕದ ನಾಲ್ವರು ಭೂಕುಸಿತಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ನಾಪತ್ತೆಯಾಗಿದ್ದಾರೆ.

ಚಾಮರಾಜನಗರ ಜಿಲ್ಲೆಯ ಇರಸವಾಡಿ ಗ್ರಾಮದ ರಾಜೇಂದ್ರ (50), ರತ್ನಮ್ಮ (45), ಪುಟ್ಟ ಸಿದ್ದಿ (62), ರಾಣಿ ಮದರ್​​ (50) ಮೃತಪಟ್ಟಿದ್ದಾರೆ. ಸದ್ಯ ಪುಟ್ಟಸಿದ್ದಶೆಟ್ಟಿ ಹಾಗೂ ರಾಣಿ ಎಂಬುವವರ ಮೃತದೇಹಗಳನ್ನು ರಕ್ಷಣಾ ಪಡೆಗಳು ಹೊರತೆಗೆದಿದ್ದಾರೆ. ತ್ರಯಂಬಕಪುರದ ಸ್ವಾಮಿಶೆಟ್ಟಿ ಎಂಬುವವರು ಗಾಯಗೊಂಡಿದ್ದಾರೆ. ಇರಸವಾಡಿ ಮೂಲದ ರಾಜನ್, ರಜನಿ ಇನ್ನೂ ನಾಪತ್ತೆಯಾಗಿದ್ದಾರೆ.

ವಯನಾಡು ಜಿಲ್ಲೆಯ ಮೆಪ್ಪಾಡಿಯ ವೈತ್ರಿ ತಾಲೂಕು ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಗುಂಡ್ಲುಪೇಟೆ ತಹಸೀಲ್ದಾರ್ ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು, ಮೃತರ ಕುಟುಂಬಸ್ಥರೊಂದಿಗೆ ಸಂಪರ್ಕದಲ್ಲಿದ್ದಾರೆ.

ಕೇರಳದಲ್ಲಿ ಸಂಕಷ್ಟಕ್ಕೆ ಸಿಲುಕಿದ ಮಂಡ್ಯದ ಕುಟುಂಬ : ಮಂಡ್ಯ ಮೂಲದ ಕುಟುಂಬವೊಂದು ಮುಂಡಕೈ ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದೆ. ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಝಾನ್ಸಿ ಎಂಬುವವರ ಕುಟುಂಬ ಸಂಕಷ್ಟದಲ್ಲಿದೆ. ಮೈಸೂರಿನ ಸರಗೂರಿನ ಅನಿಲ್ ಕುಮಾರ್ ಎಂಬುವರನ್ನು ಮದುವೆಯಾಗಿದ್ದ ಝಾನ್ಸಿರಾಣಿ ಕುಟುಂಬ ಕೇರಳದಲ್ಲಿ ನೆಲೆಸಿತ್ತು.

ಭೂಕುಸಿತದಲ್ಲಿ ಗಂಭೀರ ಗಾಯಗೊಂಡಿರುವ ಅನಿಲ್, ಪತ್ನಿ ಝಾನ್ಸಿ ಹಾಗೂ ತಂದೆ ದೇವರಾಜುರನ್ನು ಕೇರಳದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಇನ್ನು, ಝಾನ್ಸಿರಾಣಿ ಪುತ್ರ ಎರಡೂವರೆ ವರ್ಷದ ಕಂದಮ್ಮ ನಿಹಾಲ್ ಹಾಗೂ ಅತ್ತೆ ಲೀಲಾವತಿ (55) ನಾಪತ್ತೆಯಾಗಿದ್ದು, ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಝಾನ್ಸಿರಾಣಿ ಕುಟುಂಬಸ್ಥರನ್ನ ಕಾಣಲು ಕೆ.ಆರ್.ಪೇಟೆಯಿಂದ ಕೇರಳಕ್ಕೆ ತೆರಳಿದ್ದಾರೆ. ಘಟನೆ ನೆನೆದು ಆಸ್ಪತ್ರೆಯಲ್ಲಿ ಗಾಯಾಳು ಅನಿಲ್ ಕಣ್ಣೀರಿಟ್ಟಿದ್ದಾರೆ.

ಇದನ್ನೂ ಓದಿ : ಪುನೀತ್ ಕೆರೆಹಳ್ಳಿಯನ್ನು ಬೆತ್ತಲೆಗೊಳಿಸಿ ಹಿಂಸೆ ಮಾಡಿದ್ದೀರಿ, ಸ್ಟೇಷನ್​ಗೆ ಬರ್ತೀನಿ, ನೀವು ಇರ್ಬೇಕು – ACP ಚಂದನ್​ಗೆ ಪ್ರತಾಪ್​ ಸಿಂಹ​ ವಾರ್ನಿಂಗ್​…!

Leave a Comment

DG Ad

RELATED LATEST NEWS

Top Headlines

ರೋಮ್ಯಾನ್ಸ್ ಸೀನ್​ ಶೂಟಿಂಗ್ ಮಾಡುವಾಗ ಕಂಟ್ರೋಲ್ ತಪ್ಪಿದ್ರಾ ವರುಣ್ ಧವನ್ ? – ನಟಿ ಜೊತೆಗಿನ ಹಾಟ್​ ವಿಡಿಯೋ ಲೀಕ್​!

ಮುಂಬೈ : ಬಾಲಿವುಡ್​ನಲ್ಲಿ ಯಂಗ್ ಹೀರೋ ಆಗಿ ಗುರುತಿಸಿಕೊಂಡಿರುವ ನಟ ವರುಣ್ ಧವನ್ ಸಿನಿಮಾದ ರೋಮ್ಯಾನ್ಸ್ ಸೀನ್​ ಶೂಟಿಂಗ್ ವೇಳೆ ಕಂಟ್ರೋಲ್ ತಪ್ಪಿದ್ರಾ ಎಂಬ ಚರ್ಚೆಗಳು ಶುರುವಾಗಿವೆ. ನಟ

Live Cricket

Add Your Heading Text Here