Download Our App

Follow us

Home » ಜಿಲ್ಲೆ » ಧಾರಾಕಾರ ಮಳೆಗೆ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಸಂಪೂರ್ಣ ಮುಳುಗಡೆ..!

ಧಾರಾಕಾರ ಮಳೆಗೆ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಸಂಪೂರ್ಣ ಮುಳುಗಡೆ..!

ಮಂಡ್ಯ : ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಂಡ್ಯ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿದ್ದ ಸ್ವಾತಂತ್ರ ಪೂರ್ವದಲ್ಲಿ ಮೈಸೂರು ಬೆಂಗಳೂರಿಗೆ ಕೊಂಡಿಯಾಗಿದ್ದ ವೆಲ್ಲೆಸ್ಲಿ ಸೇತುವೆ ಮುಳುಗಡೆಯಾಗಿದೆ.

ಕಾವೇರಿ ನದಿಗೆ 1 ಲಕ್ಷದ 70 ಸಾವಿರ ಕ್ಯೂ. ನೀರು ಹರಿಸಿದ್ದು, ವೆಲ್ಲೆಸ್ಲಿ ಸೇತುವೆ ನೆಲಕಚ್ಚಿದೆ. ಇನ್ನೂ ಕಾವೇರಿ ಜಲಾನಯನ ಪ್ರದೇಶದಲ್ಲಿನ ಭಾರೀ ಮಳೆಗೆ ಕೃಷ್ಣರಾಜಸಾಗರ ಜಲಾಶದ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಜುಲೈ 31 ರಂದು ಸಂಜೆ 5 ಗಂಟೆಗೆ ಕೆ.ಆರ್.ಎಸ್ ಜಲಾಶಯದಿಂದ 1,70,000 ಕ್ಯೂಸೆಕ್ಸ್ ಹೊರ ಬಿಡಲಾಗಿದೆ.

ಕಾವೇರಿ ನದಿ ಪಾತ್ರದಲ್ಲಿನ ಸಾರ್ವಜನಿಕರು ಸ್ವಯಂ ಮುಂಜಾಗ್ರತೆ ವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ. ಕುಮಾರ ರವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ವಿಷ್ಣು ಮಂಚು ನಟನೆಯ ‘ಕಣ್ಣಪ್ಪ’ ಚಿತ್ರದಲ್ಲಿ ಮಧುಬಾಲ ಫಸ್ಟ್​​ಲುಕ್ ರಿಲೀಸ್..!

Leave a Comment

DG Ad

RELATED LATEST NEWS

Top Headlines

ಸೆಟ್ಟೇರಿದ ಮಹೇಶ್ ಚಿನ್ಮಯಿ ನಿರ್ದೇಶನದ ‘ಗೌರಿಶಂಕರ’ ಸಿನಿಮಾ..!

ಮಹೇಶ್ ಚಿನ್ಮಯಿ ನಿರ್ದೇಶನದ ’ಗೌರಿಶಂಕರ’ ಚಿತ್ರದ ಮುಹೂರ್ತ ಸಮಾರಂಭವು ಶ್ರೀ ವಿನಾಯಕ ವೆಂಕಟೇಶ್ವರ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ಹಿರಿಯ ನಿರ್ಮಾಪಕ ರಾಜಣ್ಣ ಕ್ಯಾಮಾರ ಆನ್ ಮಾಡಿದರೆ, ಶಿವಲಿಂಗ

Live Cricket

Add Your Heading Text Here