ಬೆಂಗಳೂರು : ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಹಂಚಿಕೆಯಾಗಿರುವ ಲೈಂಗಿಕ ದೌರ್ಜನ್ಯದ ವಿಡಿಯೋಗಳು ಅಸಲಿ ಎನ್ನುವುದು ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು, ಈ ಮೊದಲು ಅವುಗಳನ್ನು ಎಡಿಟ್ ಎಂದು ಹೇಳಲಾಗಿತ್ತು. ಆದ್ರೆ, ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಆ ವಿಡಿಯೋ ನಕಲಿ ಅಲ್ಲ ಅಸಲಿ ಎಂದು ವರದಿಯಲ್ಲಿ ಬಹಿರಂಗವಾಗಿದೆ.
ವಿಡಿಯೋಗಳು ಯಾವುದೇ ಅನಿಮೇಷನ್, ಗ್ರಾಫಿಕ್ಸ್, ಎಡಿಟ್, ಮಾರ್ಫ್ ಮಾಡಿದ್ದಲ್ಲ. ಅವು ಅಸಲಿ ವಿಡಿಯೋಗಳು ಎಂದು ಎಫ್ಎಸ್ಎಲ್ ವರದಿಯಲ್ಲಿ ದೃಢಪಟ್ಟಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ಹೆಚ್ಚಾಗಿದೆ.
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಆದರೆ, ಆ ವಿಡಿಯೋ ನಕಲಿ, ವಿರೋಧಿಗಳು ಎಡಿಟ್, ಮಾರ್ಫಿಂಗ್ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಬಳಿಕ ಎಸ್ಐಟಿ ವಿಡಿಯೋಗಳ ಅಸಲಿಯತ್ತು ತಿಳಿಯಲು ಎಫ್ಎಸ್ಎಲ್ಗೆ ಕಳುಹಿಸಿತ್ತು.
ಇದೀಗ ವಿಡಿಯೋಗಳ ಎಫ್ಎಸ್ಎಲ್ ವರದಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ಅಶ್ಲೀಲ ವಿಡಿಯೋ ಅಸಲಿ ಎಂಬುದು ಸಾಬೀತಾಗಿದೆ. ಆದ್ರೆ ಆ ವಿಡಿಯೋಗಳು ಬಂಧಿತ ಆರೋಪಿಯದ್ದೇ ಎಂದು ಸಾಬೀತಾಗಿಲ್ಲ. ಈ ಪ್ರಕರಣದ ಸಂಬಂಧ ಮತ್ತಷ್ಟು ವರದಿ ಬರಬೇಕಿದೆ.
ಇದನ್ನೂ ಓದಿ : ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ – ಇಂದು ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ..!