ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬಂದಿದ್ದ ನಿಂತಿದ್ದ ಓಮಿನಿ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ರಸ್ತೆ ಬದಿ ನಿಂತಿದ್ದ ಅಂಜಲಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಯ್ಯಪ್ಪ ನಗರದ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಡಿಕ್ಕಿ ಹೊಡೆದ ಚಾಲಕ ಬೆಳ್ತಂಗಡಿ ಠಾಣೆಗೆ ಬಂದು ಶರಣಾಗಿದ್ದಾನೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಲೋಕಸಭೆ ಚುನಾವಣೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಎದುರಾಳಿಯಾದರೆ ಒಳ್ಳೆಯದು : ಪ್ರತಾಪ್ ಸಿಂಹ..!
Post Views: 517