Download Our App

Follow us

Home » ರಾಜಕೀಯ » ಸಿದ್ದರಾಮಯ್ಯ ರಾಜ್ಯದಲ್ಲಿರುವ ಲಜ್ಜೆಗೆಟ್ಟ ಮುಖ್ಯಮಂತ್ರಿ – ಸಚಿವ ಪ್ರಹ್ಲಾದ್ ಜೋಶಿ ಕಿಡಿ..!

ಸಿದ್ದರಾಮಯ್ಯ ರಾಜ್ಯದಲ್ಲಿರುವ ಲಜ್ಜೆಗೆಟ್ಟ ಮುಖ್ಯಮಂತ್ರಿ – ಸಚಿವ ಪ್ರಹ್ಲಾದ್ ಜೋಶಿ ಕಿಡಿ..!

ಹುಬ್ಬಳ್ಳಿ : ಸಿದ್ದರಾಮಯ್ಯ ರಾಜ್ಯದಲ್ಲಿರುವ ಲಜ್ಜೆಗೆಟ್ಟ ಮುಖ್ಯಮಂತ್ರಿ. ಒಂದೂವರೆ ವರ್ಷದ ಒಳಗಾಗಿಯೇ ಸಿಎಂ ಮೇಲೆ ಗಂಭೀರ ಆರೋಪವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹರಿಯ್ದಿದ್ದಾರೆ.

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿ, ಕಾಂಗ್ರೆಸ್ ಸರ್ಕಾರದಲ್ಲಿ ದಿನದಿಂದ ದಿನಕ್ಕೆ ಭ್ರಷ್ಟಾಚಾರ ಹೆಚ್ಚುತ್ತಿದೆ. ಭ್ರಷ್ಟಾಚಾರದ ಹಣ ಹೈಕಮಾಂಡ್​​ಗೆ ಕೊಟ್ಟಿಲ್ಲ ಅಂತಾ ಸಾಬೀತು ಪಡಿಸಲಿ. ಭ್ರಷ್ಟಾಚಾರದ ಹಣದಲ್ಲೂ ಕಾಂಗ್ರೆಸ್ ಹೈಕಮಾಂಡ್ ಪಾಲುದಾರರಿದ್ದಾರೆ. ಪಾಲುದಾರಿಕೆ ಇಲ್ಲದಿದ್ದಲ್ಲಿ ಸಿದ್ಧರಾಮಯ್ಯ ರಾಜೀನಾಮೆ ಪಡೆಯಲಿ ಎಂದಿದ್ದಾರೆ.

ಇನ್ನು ಭ್ರಷ್ಟಾಚಾರದಲ್ಲಿ ನ್ಯಾಯಾಂಗ ತನಿಖೆ ಅಂದ್ರೆ ತಪ್ಪಿಸಿಕೊಳ್ಳುವ ರಹದಾರಿಯಾಗಿದೆ. ಇದು ಸ್ಪಷ್ಟವಾಗಿ ಗೇಮ್ ಪ್ಲಾನ್ ಅನ್ನೋದು ಸ್ಪಷ್ಟವಾಗಿದೆ. ಈ ಪ್ರಕರಣವನ್ನ ಸಿಬಿಐಗೆ ಕೊಡಬೇಕು.
ತಪ್ಪು ಇಲ್ಲದಿದ್ದಲ್ಲಿ ಯಾಕೆ ಕಾಂಗ್ರೆಸ್​​ನವರಿಗೆ ಭಯ. ಎರಡೂ ಭ್ರಷ್ಟಾಚಾರ ಪ್ರಕರಣದಲ್ಲಿ ಕಾಂಗ್ರೆಸ್​​ನ‌ ಹೈಕಮಾಂಡ್ ಪಾತ್ರವಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಕಿಡಿಕಾರಿದ್ದಾರೆ.

ಇದನ್ನೂ ಓದಿ : ರಾಜ್ಯ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿಗೆ ಸ್ಕೆಚ್​ – ವರಿಷ್ಠರಿಗೆ ಹೋಗಿದೆ ಕಳಪೆ ಮಂತ್ರಿಗಳ ಬಿಗ್​ ಲಿಸ್ಟ್​..!

Leave a Comment

DG Ad

RELATED LATEST NEWS

Top Headlines

ಸೆಟ್ಟೇರಿದ ಮಹೇಶ್ ಚಿನ್ಮಯಿ ನಿರ್ದೇಶನದ ‘ಗೌರಿಶಂಕರ’ ಸಿನಿಮಾ..!

ಮಹೇಶ್ ಚಿನ್ಮಯಿ ನಿರ್ದೇಶನದ ’ಗೌರಿಶಂಕರ’ ಚಿತ್ರದ ಮುಹೂರ್ತ ಸಮಾರಂಭವು ಶ್ರೀ ವಿನಾಯಕ ವೆಂಕಟೇಶ್ವರ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ಹಿರಿಯ ನಿರ್ಮಾಪಕ ರಾಜಣ್ಣ ಕ್ಯಾಮಾರ ಆನ್ ಮಾಡಿದರೆ, ಶಿವಲಿಂಗ

Live Cricket

Add Your Heading Text Here