ಬೆಂಗಳೂರು : ಯಾದಗಿರಿ PSI ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. CCB ಅಪರಾಧ ವಿಭಾಗದ ಇನ್ಸ್ಪೆಕ್ಟರ್ ತಿಮ್ಮೇಗೌಡ ಅವರು ಮರಕ್ಕೆ ನೇಣುಬಿಗಿದುಕೊಂಡು ಸೂಸೈಡ್ ಮಾಡಿಕೊಂಡ ಘಟನೆ ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕುಂಬಳಗೋಡು ಠಾಣೆ ಇನ್ಸ್ಪೆಕ್ಟರ್ ಆಗಿದ್ದ ತಿಮ್ಮೇಗೌಡ ಎರಡು ತಿಂಗಳ ಹಿಂದೆ ಸಿಸಿಬಿಗೆ ವರ್ಗಾವಣೆಗೊಂಡಿದ್ದರು. ತಿಮ್ಮೇಗೌಡ ಅವರು ರಾಮನಗರ ಜಿಲ್ಲೆ ಬಿಡದಿ ನಿರ್ಜನ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣ ಬಿಡದಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಅತ್ತಿಬೆಲೆ ಪಟಾಕಿ ದುರಂತದಲ್ಲಿ ತಿಮ್ಮೇಗೌಡ ಸಸ್ಪೆಂಡ್ ಆಗಿದ್ದರು. ನಂತರ ಪೋಸ್ಟಿಂಗ್ಗೆ ಹಣ ಕೊಡಲು ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಸಾಲದ ಶೂಲ ಹೆಚ್ಚಾಗುತ್ತಿದ್ದಂತೆ ಮನೆಯಲ್ಲೂ ನೆಮ್ಮದಿ ಕಳೆದುಕೊಂಡಿದ್ರು. ಸಾಲ ತೀರಿಸಲು ಸಾಧ್ಯವಾಗದೇ ಇನ್ಸ್ಪೆಕ್ಟರ್ ತಿಮ್ಮೇಗೌಡ ನೇಣಿಗೆ ಶರಣಾಗಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ಪೊಲೀಸರಿಂದಲೇ ನಡೀತಾ ದರೋಡೆ ಹೈಡ್ರಾಮಾ? – ಕೋರಮಂಗಲ ಪೊಲೀಸರ ಸುತ್ತ ಅನುಮಾನಗಳ ಹುತ್ತ..!