ನವದೆಹಲಿ : ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಒಕ್ಕೂಟದ ಮುಖ್ಯಸ್ಥರಾಗಿ ಮಲ್ಲಿಕಾರ್ಜುನ್ ಖರ್ಗೆ ಆಯ್ಕೆಯಾಗಿದ್ದಾರೆ. ಶನಿವಾರ ನಡೆದ ಇಂಡಿಯಾ ಮೈತ್ರಿಕೂಟದ ವರ್ಚುವಲ್ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಇನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟದ ಸಂಚಾಲಕರಾಗಲು ಕೇಳಲಾಗಿತ್ತು. ಆದ್ರೆ ಈ ಪ್ರಸ್ತಾವನೆಯನ್ನು ನಿತೀಶ್ ನಿರಾಕರಿಸಿದ್ದಾರೆ. ಹೀಗಾಗಿ ಮೈತ್ರಿಕೂಟದಲ್ಲಿ ಪರಸ್ವರ ಶುರುವಾಗಿದ್ಯಾ ಅನ್ನೋ ಪ್ರಶ್ನೆಗಳು ಹುಟ್ಟಿಕೊಳ್ತೀವೆ.
ಈ ವರ್ಚುವಲ್ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಸೀತಾರಾಂ ಯೆಚೂರಿ, ಡಿಎಂಕೆ ನಾಯಕ ಸ್ಟಾಲಿನ್ ಸೇರಿದಂತೆ 14 ಪಕ್ಷಗಳ ನಾಯಕರು ಭಾಗವಹಿಸಿದ್ದರು.
ಮಮತಾ ಬ್ಯಾನರ್ಜಿ ಮತ್ತು ಉದ್ಧವ್ ಠಾಕ್ರೆ ಸಭೆಗೆ ಹಾಜರಾಗಿರಲಿಲ್ಲ. ಸಭೆ ಮುಗಿದ ಬಳಿಕ ಬಿಹಾರ ಸಚಿವ ಸಂಜಯ್ ಝಾ ಈ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ
ಇದನ್ನೂ ಓದಿ : ಅಭಿಮಾನಿಗಳಿಗೆ ಶಾಕ್ : ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಔಟ್..!