ಲೋಕಾಯುಕ್ತ ಬಲೆಗೆ ಬಿದ್ದ ಕೆರೂರು ಠಾಣೆ PSI, PC – ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!

ಬಾಗಲಕೋಟೆ : ಇಸ್ಪೀಟ್ ಆಟಗಾರರಿಂದ ಲಂಚ ಸ್ವೀಕರಿಸಿದ ಪೊಲೀಸ್​ ಸಬ್ ಇನ್ಸ್​ಪೆಕ್ಟರ್ ಹಾಗೂ ಕಾನ್ಸ್​​​ಟೇಬಲ್ ಈಗ ಲೋಕಾಯುಕ್ತ ಅತಿಥಿಗಳಾಗಿದ್ದಾರೆ.

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕೆರೂರು ಠಾಣೆಯ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​​ ಭೀಮಪ್ಪ ರಬಕವಿ ಹಾಗೂ ಕಾನ್ಸ್​ಟೇಬಲ್ ಸಂತೋಷ್ ಬಿರಾದಾರ ಎಂಬುವವರು ಮುತ್ತಪ್ಪ ನಾಯ್ಕರ್​ನಿಂದ ಲಂಚ ಸ್ವೀಕರಿಸುವಾಗ ರೆಡ್​ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದಿದ್ದಾರೆ.

ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​​ ಭೀಮಪ್ಪ ರಬಕವಿ ಹಾಗೂ ಕಾನ್ಸ್​ಟೇಬಲ್ ಸಂತೋಷ್ ಬಿರಾದಾರ ಸಿಕ್ಕಿಬಿದ್ದ ಸುದ್ದಿ ತಿಳಿಯುತ್ತಿದ್ದಂತೆಯೇ ಯುವಕರ ಗುಂಪು ಕೆರೂರು ಪೊಲೀಸ್ ಠಾಣೆ ಮುಂದೆಯೇ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದೆ.

ಇಸ್ಪೀಟ್ ಆಡುತ್ತಿದ್ದ ಓರ್ವ ಆರೋಪಿ ರಕ್ಷಣೆಗೆ ಮುಂದಾಗಿದ್ದ ಪೊಲೀಸರು, ಬೈಕ್ ಬಿಡಲು 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಮುತ್ತಪ್ಪ ನಾಯ್ಕರ್ ಎಂಬುವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರಿನನ್ವಯ ಲೋಕಾಯುಕ್ತ SP ಮಹಾಲಿಂಗ ನಂದಗಾಂವಿ ಮಾರ್ಗದರ್ಶನದಲ್ಲಿ ದಾಳಿ ನಡೆಸಿ, ಪಿಎಸ್​ಐ ಭೀಮಪ್ಪ, ಪಿಸಿ ಬಿರಾದಾರನನ್ನು 1.70 ಲಕ್ಷ ಲಂಚ ಸ್ವೀಕರಿಸುವಾಗ ಹಿಡಿದಿದ್ದರು. ಇದರ ಬೆನ್ನಲ್ಲೇ ಯುವಕರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ :ಕರವೇ ನಾರಾಯಣ ಗೌಡರಿಗೆ ನಿಂದನೆ – ಮಹೇಶ್ ವಿಕ್ರಮ್ ಹೆಗ್ಡೆ ವಿರುದ್ಧ FIR.. ಯಾವುದೇ ಕ್ಷಣ ಅರೆಸ್ಟ್ ಸಾಧ್ಯತೆ!

Btv Kannada
Author: Btv Kannada

Leave a Comment

Read More

Read More