ಕಲಬುರಗಿ : ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮೂಡ್ ಅವರ ಕಾರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಶಾಸಕ ಬಸವರಾಜ ಮತ್ತಿಮೂಡ್ ಅವರಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ. ಈ ಘಟನೆಯು ಕಲಬುರಗಿ ಹೊರವಲಯದ ಪಾಳಾ ಗ್ರಾಮದ ಬಳಿ ನಡೆದಿದೆ. ಸದ್ಯ ಅವರನ್ನು ಜಿಲ್ಲೆಯಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲಬುರಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕರಾದ ಬಸವರಾಜ್ ಮತ್ತಿಮೂಡ ಅವರು ತಮ್ಮ ಫಾರ್ಚುನರ್ ಕಾರಿನಲ್ಲಿ ಕಲಬುರಗಿಯಿಂದ ಸಣ್ಣೂರ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಜಿಲ್ಲೆಯ ಹೊರವಲಯದ ಪಾಳಾ ಗ್ರಾಮದ ಬಳಿಯ ರಸ್ತೆಯಲ್ಲಿ ಬರುತ್ತಿದ್ದಂತೆ ಕಾರು ಪಲ್ಟಿಯಾಗಿದೆ.
ಸದ್ಯ ಗಾಯಗೊಂಡಿರುವ ಶಾಸಕರನ್ನು ಜಿಲ್ಲೆಯಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಆಸ್ಪತ್ರೆಗೆ ಭೇಟಿ ನೀಡಿ ಶಾಸಕರ ಆರೋಗ್ಯ ವಿಚಾರಣೆ ಮಾಡಿದ್ದಾರೆ.
ಇದನ್ನೂ ಓದಿ : ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ : ಮತ್ತಿಬ್ಬರು ಆರೋಪಿಗಳು ಅರೆಸ್ಟ್..!
Post Views: 335