ಇಸ್ರೇಲ್ – ಲೆಬನಾನ್ ನಡುವಿನ ಕದನ ವಿರಾಮ ಇನ್ನೂ ಮೂರು ವಾರಗಳವರೆಗೆ ವಿಸ್ತರಣೆಯಾಗಿದೆ. ಎರಡೂ ದೇಶಗಳು ಕದನ ವಿರಾಮ ವಿಸ್ತರಿಸಲು ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ಶ್ವೇತಭವನದಲ್ಲಿ ಏ.23 ರಂದು ನಡೆದ ಎರಡನೇ ಸುತ್ತಿನ ಉನ್ನತ ಮಟ್ಟದ ಮಾತುಕತೆಗಳ ನಂತರ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಟ್ರಂಪ್ ಅವರ ಮಧ್ಯಸ್ಥಿಕೆಯಲ್ಲಿ ಏ.16 ರಂದು ಮೊದಲ ಬಾರಿಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿತ್ತು.
ಎರಡೂ ರಾಷ್ಟ್ರಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯು ಅತ್ಯಂತ ಯಶಸ್ವಿಯಾಗಿದೆ ಎಂದು ಟ್ರಂಪ್ ತಮ್ಮ ‘ಟ್ರೂತ್ ಸೋಶಿಯಲ್’ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಹಿಜ್ಬುಲ್ಲಾ ಉಗ್ರಗಾಮಿ ಸಂಘಟನೆಯಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಲು ಅಮೆರಿಕವು ಲೆಬನಾನ್‌ಗೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.
ಇದನ್ನೂ ಓದಿ : SSLC ಪರೀಕ್ಷೆಯಲ್ಲಿ ಕಡಿಮೆ ಅಂಕ – ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ!
Author: Btv Kannada
Post Views: 176









