ಬೆಂಗಳೂರು : ಬಿಜೆಪಿ ಮುಖಂಡನ ಪುತ್ರನ ಲವ್, ಸೆಕ್ಸ್, ದೋಖಾ ಪ್ರಕರಣ ಭಾರೀ ಸದ್ದು ಮಾಡಿದ್ದು, ಇದೀಗ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಮಗುವಿಗೆ ಜನ್ಮ ನೀಡಿದ ಬಳಿಕ ವಂಚಿಸಿದ್ದ ಪುತ್ತೂರಿನ ಬಿಜೆಪಿ ಮಾಜಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಮೇಲಿನ ಪ್ರಕರಣ ಸಂಬಂಧ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಪ್ರಕರಣ ರದ್ದು ಕೋರಿ ಕೃಷ್ಣ ಜೆ.ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಷರತ್ತಿನ ಮೇರೆಗೆ ಕೃಷ್ಣ ಜೆ.ರಾವ್ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ.
ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್, ಸಂತ್ರಸ್ತೆ ಹಾಗೂ ಮಗು ಅಗತ್ಯತೆಗೆ ಪ್ರತಿ ತಿಂಗಳು 75 ಸಾವಿರ ಪಾವತಿಸಲು ಆದೇಶ ನೀಡಿದೆ. ಪ್ರಕರಣ ರದ್ದು ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿದ್ರು. ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಪ್ರಕರಣದ ಮುಂದಿನ ಪ್ರಕ್ರಿಯೆಗಳಿಗೆ ತಡೆ ನೀಡಿದ ಹೈಕೋರ್ಟ್, ಸಂತ್ರಸ್ತೆಗೆ ಪ್ರತಿ ತಿಂಗಳು ಹಣ ಪಾವತಿಸುವಂತೆ ಸೂಚನೆ ನೀಡಿದೆ.
ಇದನ್ನೂ ಓದಿ : ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ – ಕಿಮ್ಸ್ ಆಸ್ಪತ್ರೆಗೆ ಶಿಫ್ಟ್!









