ವಿಜಯನಗರ : ಮಳೆಯ ಅಬ್ಬರಕ್ಕೆ ಭರ್ತಿಯಾಗಿರುವ ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್ ಚೈನ್ ಲಿಂಕ್ ಮುರಿದಿದೆ. ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋಗುತ್ತಿದ್ದು, ಈ ಘಟನೆಯಿಂದ ನದಿ ಪಾತ್ರದ ಜನರಲ್ಲಿ ಭಾರೀ ಆತಂಕ ಮೂಡಿಸಿದೆ. ನೀರಾವರಿ ಇಲಾಖೆಯು ಸಹ ನದಿಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.
ಇದೀಗ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕಟ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿಕೆಶಿ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಜೊತೆ ಚರ್ಚೆ ನಡೆಸಿದ್ದಾರೆ.
ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಹಾನಿ ಆಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಸಿಎಂ ಮಂಗಳವಾರ ಡ್ಯಾಂಗೆ ಭೇಟಿ ಪರಿಶೀಲನೆ ನಡೆಸಲಿದ್ದಾರೆ.
ಈ ಬಗ್ಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್ ಅವರು, ಯಾವ ಕಾರಣ ಹಾಗೂ ಟೆಕ್ನಿಕಲ್ ಅರ್ಥ ಮಾಡಿಕೊಳ್ಳಬೇಕಾಗುತ್ತೆ. ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಕ್ರಮ ಕೈಗೊಳ್ತಾರೆ ಎಂದಿದ್ದಾರೆ.
ಇನ್ನು ಸಮಾನಾಂತರ ಜಲಾಶಯ ನಿರ್ಮಿಸಿದ್ರೆ ನೀರು ಪೋಲು ಆಗ್ತಿರಲಿಲ್ಲ. ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಅಂತಾರಾಜ್ಯ ವಿವಾದಕ್ಕೊಳಪಟ್ಟಿದೆ. ಕೋರ್ಟ್ನಲ್ಲಿ ಎರಡು ರಾಜ್ಯದವರ ಚರ್ಚೆ ಮಾಡಬೇಕಾಗುತ್ತದೆ ಎಂದು ವಿಜಯಪುರದಲ್ಲಿ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ : ಮತ್ತೆ ಸಂಕಷ್ಟದಲ್ಲಿ ಕಾಫಿ ಡೇ – ದಿವಾಳಿತನದ ಪ್ರಕ್ರಿಯೆಗೆ ಎನ್‌ಸಿಎಲ್‌ಟಿ ಆದೇಶ..!