ಬೆಂಗಳೂರು : ಹಲವು ದಿನಗಳ ಬಳಿಕ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಮಳೆಯಾಗಿದ್ದು, ಇಡೀ ಸಿಲಿಕಾನ್ ಸಿಟಿಯ ಜೀವನ ತತ್ತರಿಸಿ ಹೋಗಿದೆ. ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ ಬಹುತೇಕ ರಸ್ತೆಗಳಲ್ಲಿ ಕೆಸರು ಎದ್ದಿತ್ತು.
ಇದೀಗ ಬೆಂಗಳೂರಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 16 ವರೆಗೆ ಸಿಲಿಕಾನ್ ಸಿಟಿಯಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನು ಸಿಲಿಕಾನ್ ಸಿಟಿಯ ಕೆಲ ಭಾಗದಲ್ಲಿ ನಾಲ್ಕು ದಿನ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಇದರೊಂದಿಗೆ ಭಾರೀ ಮಳೆಯಾಗುವ ಸಾದ್ಯತೆ ಹಿನ್ನಲೆಯಲ್ಲಿ ಬೆಂಗಳೂರಿಗೆ ನಾಳೆ ಹವಾಮಾನ ಇಲಾಖೆ ಆರೆಂಜ್ ಆಲರ್ಟ್ ಘೋಷಿಸಿದೆ.
ಇದನ್ನೂ ಓದಿ : ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೈಕೋರ್ಟ್ ತಡೆಯಾಜ್ಞೆ..!
Post Views: 164