Download Our App

Follow us

Home » ಸಿನಿಮಾ » ಸ್ಯಾಂಡಲ್​​ವುಡ್​​ಗೆ ‘ಮದ್ದಾನೆ’ ಎಂಟ್ರಿ – ಸತೀಶ್ ಕುಮಾರ್ ಎಸ್ ನಿರ್ದೇಶನದ ಚಿತ್ರಕ್ಕೆ ನಿಹಾಲ್ ರಾಜ್ ನಾಯಕ..!

ಸ್ಯಾಂಡಲ್​​ವುಡ್​​ಗೆ ‘ಮದ್ದಾನೆ’ ಎಂಟ್ರಿ – ಸತೀಶ್ ಕುಮಾರ್ ಎಸ್ ನಿರ್ದೇಶನದ ಚಿತ್ರಕ್ಕೆ ನಿಹಾಲ್ ರಾಜ್ ನಾಯಕ..!

ನಿಹಾಲ್ ರಾಜ್ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ‘ಮದ್ದಾನೆ’ ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಪ್ಯಾಂಥರ್ಸ್ ಕ್ರಿಯೇಟಿವ್ ಸಿನಿಮಾಸ್ ಲಾಂಛನದಲ್ಲಿ ರಂಜನ ಎಂ ಕುಮಾವತ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಸತೀಶ್ ಕುಮಾರ್ ಎಸ್ ನಿರ್ದೇಶನ ಮಾಡಿದ್ದಾರೆ. ಈ ಸಮಾರಂಭಕ್ಕೆ ನಿರ್ಮಾಪಕರಾದ ಕೆ.ಮಂಜು , ರಮೇಶ್ ಯಾದವ್ ಹಾಗೂ ಕಡ್ಡಿಪುಡಿ ಚಂದ್ರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

“ಮದ್ದಾನೆ” ನನ್ನ ಮೊದಲ ನಿರ್ದೇಶನದ ಚಿತ್ರ ಎಂದು ಸಿನಿಮಾದ ಬಗ್ಗೆ ಅಭಿಪ್ರಾಯ ಹಂಚಿಕೊಂಡ ನಿರ್ದೇಶಕ ಸತೀಶ್ ಕುಮಾರ್ ಅವರು, ಇದೊಂದು ಹಳ್ಳಿ ಹಾಗೂ ಕಾಡಿನ ನಡುವೆ ನಡೆಯುವ ಕಥೆ. ಹೆಚ್ಚಿನ ಭಾಗದ ಚಿತ್ರೀಕರಣ ಚಿಕ್ಕಮಗಳೂರಿನಲ್ಲೇ ನಡೆಯುತ್ತದೆ. ನಿಹಾಲ್ ರಾಜ್ ನಾಯಕನಾಗಿ ನಟಿಸುತ್ತಿದ್ದಾರೆ. ನನ್ನ ಶ್ರೀಮತಿ ರಂಜನ ಎಂ ಕುಮಾವತ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇನ್ನು ವಿನೋದ್ ಭಾರತಿ ಛಾಯಾಗ್ರಹಣ, ಸ್ವಾಮಿನಾಥನ್ ಸಂಗೀತ ನಿರ್ದೇಶನ, ಪುನೀತ್ ಆರ್ಯ ಸಾಹಿತ್ಯ ಹಾಗೂ ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಅರವಿಂದ್ ರಾವ್ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. ಮೂಲತಃ ಮಾರ್ಷಲ್ ಆರ್ಟ್ಸ್ ಕಲಾವಿದನಾಗಿರುವ ನಾನು, ಈವರೆಗೂ ಸಾಕಷ್ಟು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಭಾಗವಹಿಸಿ ಪದಕ ಪಡೆದಿದ್ದೇನೆ. ಬೆಂಗಳೂರಿನ ಕೆಲವು ಕಡೆ ಮಾರ್ಷಲ್ ಆರ್ಟ್ಸ್ ತರಭೇತಿ ಶಾಲೆಗಳನ್ನು ನಡೆಸುತ್ತಿದ್ದೇನೆ. ಮೂವತ್ತು ವರ್ಷಗಳಿಂದ ಕನ್ನಡ ಚಿತ್ರಗಳನ್ನೇ ನೋಡಿಕೊಂಡು ಬರುತ್ತಿರುವ ಪ್ರೇಕ್ಷಕ ನಾನು. ಸಿನಿಮಾ ನಿರ್ದೇಶನ ನನ್ನ ಕನಸು. ನಿರ್ದೇಶನದ ಬಗ್ಗೆಯೂ ಓದಿಕೊಂಡು ಬಂದು ಈಗ ಮೊದಲ‌ ನಿರ್ದೇಶನದ ಚಿತ್ರ ಆರಂಭಿಸಿದ್ದೇನೆ ಎಂದರು.

ನಾಯಕ ನಿಹಾಲ್ ರಾಜ್ ಮಾತನಾಡಿ, ನಾನು ಮೂಲತಃ ರಂಗಭೂಮಿ ಕಲಾವಿದ. “ರಾಣಾ” ಹಾಗೂ “ವಿಷ್ಣುಪ್ರಿಯ” ಚಿತ್ರಗಳಲ್ಲಿ ನಟಿಸಿದ್ದೇನೆ. ಕೆ.ಮಂಜು ಅವರ ಸಹಕಾರ ಮೊದಲಿನಿಂದಲೂ ಇದೆ. ಇಂದು ನಾನು ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರಕ್ಕೂ ಬಂದು ಅವರು ಹಾರೈಸಿದ್ದು ಸಂತೋಷವಾಗಿದೆ. ಅವರಿಗೆ ಹಾಗೂ ಅವಕಾಶ ನೀಡಿದ ನಿರ್ದೇಶಕ, ನಿರ್ಮಾಪಕರಿಗೆ ಧನ್ಯವಾದ ಎಂದರು.

ನಿರ್ಮಾಪಕಿ ರಂಜನ ಎಂ ಕುಮಾವತ್ ಮೊದಲ ನಿರ್ಮಾಣದ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು . ಬಳಿಕ ಸಂಗೀತ ನಿರ್ದೇಶಕ ಸ್ವಾಮಿನಾಥನ್, ಛಾಯಾಗ್ರಾಹಕ ವಿನೋದ್ ಭಾರತಿ, ಗೀತರಚನೆಕಾರ ಪುನೀತ್ ಆರ್ಯ, ಸಾಹಸ ನಿರ್ದೇಶಕ ಡಿಫರೆಂಟ್ ಡ್ಯಾನಿ ಹಾಗೂ ನಟ ಅರವಿಂದ್ ರಾವ್ ತಮ್ಮ ಕಾರ್ಯಗಳ ಕುರಿತು ಮಾಹಿತಿ ನೀಡಿದರು.

ಇದನ್ನೂ ಓದಿ : ಸೆಟ್ಟೇರಿತು ಗುರುನಂದನ್ ನಟನೆಯ ಹೊಸ ನಿನಿಮಾ – ಚಿತ್ರತಂಡಕ್ಕೆ ಅಶ್ವಿನಿ‌ ಪುನೀತ್ ರಾಜ್​​ಕುಮಾರ್ ಸಾಥ್​​..!

Leave a Comment

DG Ad

RELATED LATEST NEWS

Top Headlines

ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ಸರಿಗಮ ವಿಜಿ ನಿಧನ!

ಕನ್ನಡ ಚಿತ್ರರಂಗ ಹಿರಿಯ ನಟ ಸರಿಗಮ ವಿಜಿ ಅವರು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ವಿಜಿ

Live Cricket

Add Your Heading Text Here