Download Our App

Follow us

Home » ರಾಷ್ಟ್ರೀಯ » 78ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣಕ್ಕೆ ಕ್ಷಣಗಣನೆ – ಕೆಂಪುಕೋಟೆಯಲ್ಲಿ ಇತಿಹಾಸ ಬರೆಯಲಿದ್ದಾರೆ ಪ್ರಧಾನಿ ಮೋದಿ..!

78ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣಕ್ಕೆ ಕ್ಷಣಗಣನೆ – ಕೆಂಪುಕೋಟೆಯಲ್ಲಿ ಇತಿಹಾಸ ಬರೆಯಲಿದ್ದಾರೆ ಪ್ರಧಾನಿ ಮೋದಿ..!

ನವದೆಹಲಿ : ಭಾರತವು ತನ್ನ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದೆ. ಅಸಂಖ್ಯಾತ ಹೋರಾಟಗಾರರ ತ್ಯಾಗ ಬಲಿದಾನಗಳ ಫಲವಾಗಿ ಇಂದು ನಾವು ಆಚರಿಸುತ್ತಿರುವ ಸ್ವಾತಂತ್ರ್ಯೋತ್ಸವ ಆ ಮಹಾನ್ ಹೋರಾಟಗಾರರಿಗೆ ನೀಡುವ ಬಹುದೊಡ್ಡ ಗೌರವ. ಈ ದಿನವನ್ನು ರಾಷ್ಟ್ರದ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲು ಎಂದು ಗುರುತಿಸಲಾಗಿದೆ.

ವಾಡಿಕೆಯಂತೆ ಇಂದು 11ನೇ ಬಾರಿ ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕಳೆದ ಹತ್ತು ವರ್ಷಗಳಿಂದ ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಈ ಬಾರಿ ಸ್ವಾತಂತ್ರ್ಯ ದಿನದ 11ನೇ ಭಾಷಣ ಮಾಡಲಿದ್ದಾರೆ. ಹೀಗಾಗಿ ಅವರ ಭಾಷಣವನ್ನು ಕೇಳಲು ದೇಶದ ಮೂಲೆಮೂಲೆಯಲ್ಲೂ ಜನರು ಕಾದು ಕುಳಿತಿದ್ದಾರೆ.

ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ದಾಖಲೆ ಬರೆದಿರುವ ಅವರು, ಈ ಅವಧಿಯ ಮೊದಲ ಸ್ವಾತಂತ್ರ್ಯ ದಿನದ ಭಾಷಣವಾಗಿದೆ. ಈ ಭಾಷಣದೊಂದಿಗೆ ಪ್ರಧಾನಿ ಮೋದಿ ಅವರು ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಯವರ ಅನಂತರ ಕೆಂಪು ಕೋಟೆಯಲ್ಲಿ ಸತತ 11 ಸ್ವಾತಂತ್ರ್ಯ ದಿನದ ಭಾಷಣ ಮಾಡುವ ಮೂರನೇ ಭಾರತೀಯ ಪ್ರಧಾನಿಯಾಗಲಿದ್ದಾರೆ.

ಮೋದಿಯವರ ಈ ಬಾರಿಯ 11ನೇ ಭಾಷಣ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸಂಖ್ಯೆಯನ್ನು ಮೀರಿಸಲಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 10 ಸ್ವಾತಂತ್ರ್ಯ ದಿನದ ಭಾಷಣಗಳನ್ನು ಮಾಡಿರುವ ದಾಖಲೆ ಹೊಂದಿದ್ದಾರೆ.  ದೇಶದ ಎಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ ಸಡಗರ, ಸಂಭ್ರಮಾಚರಣೆ ನಡೆಯುತ್ತಿದ್ದು, ಗಲ್ಲಿ-ಗಲ್ಲಿಗಳಲ್ಲೂ ತ್ರಿವರ್ಣ ಧ್ವಜ ರಾರಾಜಿಸುತ್ತಿವೆ. ಇಡೀ ಭಾರತ ದೇಶಭಕ್ತಿಯಲ್ಲಿ ಮಿಂದೇಳುತ್ತಿದೆ.  ಘರ್​​-ಘರ್​ ತಿರಂಗಾ ಅಭಿಯಾನದಿಂದ ಮನೆ ಮೇಲೆಲ್ಲಾ ತ್ರಿವರ್ಣ ವೈಭವ ರಂಗೇರಿದೆ.

ಇದನ್ನೂ ಓದಿ : ಖ್ಯಾತ ಸಂಗೀತ ನಿರ್ದೇಶಕ ಅನೂಪ್ ಸೀಳಿನ್ ಹೊಸ ವಿಡಿಯೋ‌ ಆಲ್ಬಂ “ಪ್ರೀತಿ ಅನ್ನೋ ದ್ಯಾವ್ರು” ಲೋಕಾರ್ಪಣೆ..!

Leave a Comment

DG Ad

RELATED LATEST NEWS

Top Headlines

ಬೇನಾಮಿ, ನಕಲಿ ವ್ಯಕ್ತಿಗಳ ಹೆಸರಲ್ಲಿ ಮುಡಾ ಸೈಟ್ ಹಂಚಿಕೆ.. 300 ಕೋಟಿ ಆಸ್ತಿ ಜಪ್ತಿ – ಇಡಿ ಹೇಳಿದ್ದೇನು?

ಬೆಂಗಳೂರು : ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿಗಳನ್ನ ಜಪ್ತಿ ಮಾಡಿದೆ. ಮೈಸೂರು ಲೋಕಾಯುಕ್ತ ದಾಖಲಿಸಿದ FIR

Live Cricket

Add Your Heading Text Here