Download Our App

Follow us

Home » ರಾಜಕೀಯ » ಪ್ರಾಸಿಕ್ಯೂಷನ್​​ ವಿವಾದದ ಹೊತ್ತಲ್ಲೇ ಸಿದ್ದು ಸರ್ಕಾರಕ್ಕೆ ರಾಜ್ಯಪಾಲರ ಮೆಚ್ಚುಗೆ​..!

ಪ್ರಾಸಿಕ್ಯೂಷನ್​​ ವಿವಾದದ ಹೊತ್ತಲ್ಲೇ ಸಿದ್ದು ಸರ್ಕಾರಕ್ಕೆ ರಾಜ್ಯಪಾಲರ ಮೆಚ್ಚುಗೆ​..!

ಬೆಂಗಳೂರು : 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜಭವನದ ಅಂಗಳದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ರಾಜಭವನದ ಅಂಗಳದಲ್ಲಿರುವ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ನಂತರ ಧ್ವಜಾರೋಹಣ ನೆರವೇರಿಸಿದ್ದಾರೆ.

ರಾಜ್ಯದ ಜನತೆಗೆ ರಾಜ್ಯಪಾಲರ ಸಂದೇಶ : ಕರ್ನಾಟಕದ ಜನತೆಗೆ 78ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಆಗಸ್ಟ್15 ನಮಗೆ ಐತಿಹಾಸಿಕ ದಿನ ಮತ್ತು ನಮಗೆ ಸ್ವಾತಂತ್ರ್ಯ ನೀಡಿದ ಆ ಮಹಾಪುರುಷರು ಮತ್ತು ಹುತಾತ್ಮರನ್ನು ಸ್ಮರಿಸುವ ದಿನ. ಈ ದಿನ ಅವರಿಂದ ಸ್ಫೂರ್ತಿ ಪಡೆದು ಹೊಸ ಹಾದಿ ಮತ್ತು ಹೊಸ ಸಂಕಲ್ಪದೊಂದಿಗೆ ಮುನ್ನಡೆಯಲು ಅವಕಾಶವಿದೆ ಎಂದರು.

ಇನ್ನು, ಪ್ರಾಸಿಕ್ಯೂಷನ್​​ ವಿವಾದದ ಹೊತ್ತಲ್ಲೇ ಸಿದ್ದು ಸರ್ಕಾರಕ್ಕೆ ರಾಜ್ಯಪಾಲರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಸರ್ಕಾರದ ಪಂಚ ಗ್ಯಾರಂಟಿಗಳನ್ನು ರಾಜ್ಯಪಾಲರು ಶ್ಲಾಘಿಸಿದ್ದಾರೆ. ಮಹಿಳೆಯರು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕಾಗಿ ಮತ್ತು ನಿರುದ್ಯೋಗಿ ಯುವಕರಿಗೆ ಸಹಾಯ ಮಾಡಲು ರಾಜ್ಯ ಸರ್ಕಾರದಿಂದ 5 ಖಾತರಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಪ್ರಾಸಿಕ್ಯೂಷನ್ ಫೈಟ್​ ಹೊತ್ತಲ್ಲೇ ರಾಜ್ಯಪಾಲರು ಸರ್ಕಾರಕ್ಕೆ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ.

ಸ್ವಾತಂತ್ರ್ಯಾನಂತರ ದೇಶ ಮತ್ತು ಕರ್ನಾಟಕ ರಾಜ್ಯದಲ್ಲಿ ಸರ್ವತೋಮುಖ ಅಭಿವೃದ್ಧಿಯಾಗಿದೆ. ಕರ್ನಾಟಕ ದೇಶದ ಪ್ರಗತಿಪರ ರಾಜ್ಯ. ಕರ್ನಾಟಕ ರಾಜ್ಯವು ಅಭಿವೃದ್ಧಿ ಉಪಕ್ರಮಗಳ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ಗುರಿಯೊಂದಿಗೆ ಮೂಲ ಸೇವೆಗಳಿಗೆ ಪ್ರವೇಶ ಸೇರಿದಂತೆ ವಿವಿಧ ನವೀನ ಮತ್ತು ಅಂತರ್ಗತ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ನಮ್ಮ ರಾಜ್ಯವು ಪ್ರವರ್ತಕವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ – ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಸಿಎಂ ಸಿದ್ದು ಸ್ಪಷ್ಟನೆ..!

Leave a Comment

DG Ad

RELATED LATEST NEWS

Top Headlines

‘ಲಕ್ಷ್ಮೀಪುತ್ರ’ನಾದ ಸ್ಯಾಂಡಲ್​ವುಡ್ ಉಪಾಧ್ಯಕ್ಷ ಚಿಕ್ಕಣ್ಣ – ಸಾಥ್ ಕೊಟ್ಟ ಎ.ಪಿ ಅರ್ಜುನ್..!

ಕಿಸ್, ಅದ್ಧೂರಿ ಲವರ್ಸ್​ನಂತಹ ಸದಭಿರುಚಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ಕೊಡುಗೆಯಾಗಿ ಕೊಟ್ಟ ಎಪಿ ಅರ್ಜುನ್ ಫಿಲ್ಮಂಸ್​​ನ ಮೂರನೇ ಸಿನಿಮಾ ಅನೌನ್ಸ್ ಆಗಿದೆ. ಎಪಿ ಅರ್ಜುನ್ ಒಡೆತನದ ಎಪಿ

Live Cricket

Add Your Heading Text Here