ಜಮ್ಮು – ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಹಿರಿಯ ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಎಂ.ಜಿ ರಾಮಮೂರ್ತಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷರಾದ ಸುಂದರರಾಜ್, ನಿರ್ಮಾಪಕ ಎನ್ ಎಸ್ ರಾಜಕುಮಾರ್, ಇನ್ನೋವೇಟಿವ್ ಪ್ರಸಾದ್, ನಿರ್ಮಾಪಕರ ಸಂಘದ ಜಂಟಿ ಕಾರ್ಯದರ್ಶಿ ರಮೇಶ್ ಯಾದವ್ ಸೇರಿದಂತೆ ಕನ್ನಡ ಚಿತ್ರರಂಗದ ಗಣ್ಯರು ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರನ್ನು ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ನಿರ್ಮಾಪಕ ಎನ್ ಎಸ್ ರಾಜಕುಮಾರ್ ಈ ಭೇಟಿಯ ವ್ಯವಸ್ಥೆಯನ್ನು ಮಾಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು, ಕನ್ನಡ ಚಿತ್ರಗಳ ಚಿತ್ರೀಕರಣಕ್ಕೆ ಜಮ್ಮು – ಕಾಶ್ಮೀರದಲ್ಲಿ ಸೂಕ್ತ ವ್ಯವಸ್ಥೆ ಹಾಗೂ ಭದ್ರೆತೆ ನೀಡುವುದರ ಜೊತೆಗೆ ಇನ್ಸೆಂನ್ಟಿವ್ ಸಹ ನೀಡುವುದಾಗಿ ಹೇಳಿದ್ದಾರೆ. ಜೊತೆಗೆ ಕನ್ನಡ ಚಿತ್ರರಂಗದ ಪ್ರಮುಖರ ತಂಡ ಸದ್ಯದಲ್ಲೇ ಜಮ್ಮು – ಕಾಶ್ಮೀರಕ್ಕೆ ಬನ್ನಿ ಎಂದು ಆಹ್ವಾನ ಕೂಡ ನೀಡಿದ್ದಾರೆ.

ಇದನ್ನೂ ಓದಿ : ಮೂರು ಬಾರಿ ಸೋತವರು ಮಾತನಾಡಲು ಯೋಗ್ಯರೇ? – ನಿಖಿಲ್ ಕುಮಾರಸ್ವಾಮಿಗೆ ಚೇತನ್ ಟಾಂಗ್!








