ಯಡ್ರಾಮಿ ಬಳಿ ಭೀಕರ ಅಪಘಾತ – ಬೈಕ್‌ಗೆ NEKRTC ಬಸ್ ಡಿಕ್ಕಿ, ಯುವತಿ ಸ್ಥಳದಲ್ಲೇ ಸಾವು!

ಕಲಬುರಗಿ : ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ರಾಸಣಗಿ ಕ್ರಾಸ್ ಬಳಿ ಬೈಕ್‌ನಲ್ಲಿ ಸ್ವಗ್ರಾಮಕ್ಕೆ ಹೋಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ 20 ವರ್ಷದ ಭೂಮಿಕಾ ಹಂಗರಗಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರ ಅಮೋಘಸಿದ್ದ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿಂಬದಿಯಿಂದ ಅತಿ ವೇಗವಾಗಿ ಬಂದ NEKRTC (ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ) ಬಸ್, ಬೈಕ್‌ಗೆ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ಯುವತಿ ಭೂಮಿಕಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರ ಅಮೋಘಸಿದ್ದ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಘಟನೆ ಸಂಬಂಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಸ್ ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಆರಂಭಿಸಿದ್ದಾರೆ.

ಇದನ್ನೂ ಓದಿ : ಇಂಡಿಗೋ ವಿಮಾನಯಾನದಲ್ಲಿ ಭಾರೀ ವ್ಯತ್ಯಯ – ದೇಶಾದ್ಯಂತ 200ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು!

Btv Kannada
Author: Btv Kannada

Read More