ಬೆಂಗಳೂರು : ಅನುಮತಿ ಪಡೆಯದೇ ತಮ್ಮ ನಿರ್ಮಾಣ ಸಂಸ್ಥೆಯಿಂದ ತಯಾರಾದ ಎರಡು ಹಾಡುಗಳನ್ನು ‘ಬ್ಯಾಚ್ಯುಲರ್ ಪಾರ್ಟಿ’ ಸಿನಿಮಾದಲ್ಲಿ ಬಳಕೆ ಮಾಡಿದ್ದಕ್ಕಾಗಿ ಎಂಆರ್ಟಿ (MRT) ಮ್ಯೂಸಿಕ್ ಸಂಸ್ಥೆಯು ದೆಹಲಿ ಹೈಕೋರ್ಟ್ ಮೆಟ್ಟಿಲು ಏರಿತ್ತು. ಆದರೆ ರಕ್ಷಿತ್ ಶೆಟ್ಟಿ ದೆಹಲಿ ಕೋರ್ಟ್ಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ರಕ್ಷಿತ್ ಶೆಟ್ಟಿ ಮತ್ತು ಪರಂವಾ ಸ್ಟುಡಿಯೋಗೆ ಕಾಪಿ ರೈಟ್ ಉಲ್ಲಂಘನೆಗಾಗಿ 20 ಲಕ್ಷ ಠೇವಣಿ ಇಡಲು ಮತ್ತು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿರೋ ಹಾಡು ತಗೆಯುವಂತೆ ಆದೇಶ ಹೊರಡಿಸಿದೆ.
ನಟ ರಕ್ಷಿತ್ ಶೆಟ್ಟಿ ಎಂ.ಆರ್.ಟಿ ಹಕ್ಕು ಹೊಂದಿರೋ ‘ನ್ಯಾಯ ಎಲ್ಲಿದೆ’ ಮತ್ತು ‘ಒಮ್ಮೆ ನಿನ್ನನ್ನು’ ಹಾಡನ್ನು ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಬಳಕೆ ಮಾಡಿದ್ದರು. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು.
ಈ ಸಂಬಂಧ ಹಕ್ಕುಸ್ವಾಮ್ಯ ಹಾಗೂ ಪ್ರಸಾರದ ಹಕ್ಕನ್ನು ಖರೀದಿ ಮಾಡದೇ ಹಾಡುಗಳ ಬಳಕೆಯಾಗಿದೆ ಎಂದು ಎಂಆರ್ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ದೂರು ನೀಡಿದ್ದರು. ದೂರಿನ ಮೇರೆಗೆ ಕಾಪಿ ರೈಟ್ಸ್ ಆ್ಯಕ್ಸ್ ಸೆ. 63 ರಡಿ ಅನುಮತಿ ಇಲ್ಲದೇ ಹಾಡು ಬಳಕೆ ಮಾಡಿದ ಆರೋಪದಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲು ಮಾಡಲಾಗಿತ್ತು.
ಇನ್ನು ರಕ್ಷಿತ್ ಶೆಟ್ಟಿ ಮತ್ತು ಪರಂವಾಗೆ ಹೈಕೋರ್ಟ್ ನೋಟಿಸ್ ನೀಡಿತ್ತು. ಈ ನೋಟಿಸ್ಗೆ ರಕ್ಷಿತ್ ಶೆಟ್ಟಿ ಕೋರ್ಟಿಗೆ ಹಾಜರಾಗದ ಕಾರಣದಿಂದಾಗಿ ಸೋಷಿಯಲ್ ಮೀಡಿಯಾ ಸೇರಿದಂತೆ, ಹಾಡುಗಳು ಬಳಕೆಯಾದ ಕಡೆಯಲ್ಲಿ ತೆಗೆದುಹಾಕಬೇಕು ಮತ್ತು 20 ಲಕ್ಷ ರೂಪಾಯಿ ಠೇವಣಿ ಇಡಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.
ಇದನ್ನೂ ಓದಿ : ಮುಖ್ಯಮಂತ್ರಿಗಳೇ ಭಂಡತನ ಬಿಡಿ.. ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ – ಬಿ.ವೈ ವಿಜಯೇಂದ್ರ ಆಗ್ರಹ..!