ಮಾರಾಕಾಸ್ತ್ರಗಳಿಂದ ಕೊಚ್ಚಿ ಗ್ರಾ.ಪಂ ಸದಸ್ಯನ ಬರ್ಬರ ಹತ್ಯೆ!

ಚಿಕ್ಕಮಗಳೂರು : ಮಾರಾಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂಚಾಯತ್​​ ಸದಸ್ಯನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಡೂರಿನ ಸಖರಾಪಟ್ಟಣದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದೆ. 38 ವರ್ಷದ ಗಣೇಶ್ ಮೃತ ಗ್ರಾಮ ಪಂಚಾಯತ್​​ ಸದಸ್ಯ.

2 ಗುಂಪುಗಳ ಮಾರಾಮಾರಿಯಲ್ಲಿ ಕಾಂಗ್ರೆಸ್ ಗ್ರಾ.ಪಂ ಸದಸ್ಯನ ಹತ್ಯೆಯಾಗಿದೆ. ಮೃತ ಗಣೇಶ್ ಮುಂಬರೋ ಜಿ.ಪಂ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ. ಕಳೆದ ರಾತ್ರಿ ಸಖರಾಯಪಟ್ಟಣದಲ್ಲಿ 2 ಗುಂಪುಗಳ ಮಧ್ಯೆ ಗಲಾಟೆ ನಡೆದಿದ್ದು, ಬಾರ್ ಬಳಿ ಗಲಾಟೆಯಾದ ಅರ್ಧ ಗಂಟೆ ಬಳಿಕ ಮಠದ ಬಳಿ ಗಲಾಟೆಯಾಗಿ ಈ ಭೀಕರ ಹತ್ಯೆ ನಡೆದಿದೆ.

ಎದುರಾಳಿ ಗುಂಪಿನ ಇಬ್ಬರ ತಲೆಗೂ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಡಿವೈಡರ್​ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು – ಲೋಕಾಯುಕ್ತ ಇನ್ಸ್​ಪೆಕ್ಟರ್ ಪಂಚಾಕ್ಷರಯ್ಯ ಸಾಲಿಮಠ ಸಜೀವ ದಹನ!

Btv Kannada
Author: Btv Kannada

Read More