ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಕಾನೂನು ಸಂಕೋಲೆಯಲ್ಲಿ ಸಿಲುಕಿದ್ದಾರೆ. ಸಿಎಂ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಮೊದಲಿನಿಂದಲೂ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಕೊಡಲು ಸಾಧ್ಯವೇ ಇಲ್ಲ ಅಂತಾ ವಾದಿಸುತ್ತಾ ಬಂದಿದ್ದ ಸಿದ್ದರಾಮಯ್ಯ, ಕಾನೂನು ಹೋರಾಟ ಮಾಡುತ್ತೇನೆ ಅಂತಾ ತೊಡೆ ತಟ್ಟಿದ್ದರು. ಇದೀಗ ಅಂಥದ್ದೇ ಸನ್ನಿವೇಶ ಸಿಎಂಗೆ ಎದುರಾಗಿದೆ.
ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಲು ಸಿಎಂ ಪರ ವಕೀಲರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸಿದ್ದು ಪರ ದೇಶದ ಸೀನಿಯರ್ ಲಾಯರ್ಸ್ ವಾದ ಮಂಡಿಸಲಿದ್ದಾರೆ. ಸುಪ್ರೀಂಕೋರ್ಟ್ನ ಖ್ಯಾತ ವಕೀಲರಾಗಿರುವ ಕಪಿಲ್ ಸಿಬಲ್, ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸೋ ಸಾಧ್ಯತೆಯಿದೆ. ಕಪಿಲ್ ಸಿಬಲ್, ಅಭಿಷೇಕ್ ಮನುಸಿಂಘ್ವಿ ಅವರು ಇಂದೇ ಬೆಂಗಳೂರಿಗೆ ಬರ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ಇಬ್ಬರು ವಕೀಲರ ಜೊತೆ ಚರ್ಚಿಸಿ ಪ್ರಾಸಿಕ್ಯೂಷನ್ ರದ್ದು ಕೋರಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಪ್ರಾಸಿಕ್ಯೂಷನ್ ಆದೇಶವನ್ನು ಕಾನೂನಾತ್ಮಕವಾಗಿ ಎದುರಿಸಲು ಸಿದ್ಧತೆ ಮಾಡಿಕೊಂಡಿದ್ದು, ಈ ಬಗ್ಗೆ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಜೊತೆ ಚರ್ಚೆ ನಡೆಸಿದ್ದಾರೆ. ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡುವ ಮುನ್ನವೇ ಸಿಎಂ ಹೈಕೋರ್ಟ್ ಮೊರೆ ಹೋಗಲಿದ್ದಾರೆ. ಆಗಸ್ಟ್ 20ರಂದು ಜನಪ್ರತಿನಿಧಿಗಳ ಕೋರ್ಟ್ ತೀರ್ಪು ಸಾಧ್ಯತೆಯಿದ್ದು, ವಿಶೇಷ ಕೋರ್ಟ್ ತೀರ್ಪಿಗೂ ಮುನ್ನ ತಮ್ಮ ವಾದ ಆಲಿಸಿ ಎಂದು ಸಿಎಂ ಅರ್ಜಿ ಸಲ್ಲಿಸಲಿದ್ದಾರೆ.
ಇದನ್ನೂ ಓದಿ : ನಾನ್ಯಾಕೆ ರಾಜೀನಾಮೆ ನೀಡಲಿ? ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆ ನೀಡಬೇಕು : ಸಿಎಂ ಸಿದ್ದರಾಮಯ್ಯ..!