ಗದಗ : ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಮಡೆದಿದೆ.
ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ(45), ಮಗಳು ಐಶ್ವರ್ಯ (16), ಮಗ ವಿಜಯ(12) ಮೃತ ದುರ್ದೈವಿಗಳು. ಮೃತ ಕುಟುಂಬ ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟ್ಟಿತ್ತು. ಹೀಗಾಗಿ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರು ಹಾಗೂ ಇಳಕಲ್ನಿಂದ ಹುಬ್ಬಳ್ಳಿಗೆ ಹೊರಟಿದ್ದ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನರಗುಂದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ – ಹೈಕೋರ್ಟ್ ಮೊರೆ ಹೋಗಲು ಸಿಎಂ ಸಿದ್ದು ತಯಾರಿ..!
Post Views: 493