ಯಾದಗಿರಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಅಂಗಡಿಗಳಿಗೆ ಬೆಂಕಿ ತಗುಲಿ ಭಾರೀ ಅನಾಹುತ ಸಂಭವಿಸಿದ ಘಟನೆ ಇಂದು ಮುಂಜಾನೆ ಸೈದಾಪುರ ಪಟ್ಟಣದ ವಾರದ್ ಕಾಂಪ್ಲೇಕ್ಸ್ನಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಹೋಟೆಲ್, ಬೇಕರಿ, ಗ್ಯಾರೇಜ್ ಸೇರಿ 15ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ.
ಸೈದಾಪುರ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಇಲ್ಲದೇ ಇರುವುದರಿಂದ ಘಟನೆ ನಡೆದು ಒಂದು ಗಂಟೆ ತಡವಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.
ಅಷ್ಟೊತ್ತಿಗಾಗಲೇ ಸುಮಾರು ಲಕ್ಷಾಂತರ ರೂ. ಪ್ರಮಾಣದ ಸಾಮಾಗ್ರಿಗಳು ಬೆಂಕಿಗಾಹುತಿಯಾಗಿದೆ. ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸೈದಾಪುರ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಆರಂಭಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಪ್ರೊ ಕಬಡ್ಡಿ : ಮೊಟ್ಟ ಮೊದಲ ಬಾರಿಗೆ ಬೆಂಗಳೂರು ಬುಲ್ಸ್ ತಂಡಕ್ಕೆ ಕನ್ನಡಿಗ ಆಯ್ಕೆ..!
Post Views: 105