ಮಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನ ಖಂಡಿಸಿ ಇಂದು ಕಾಂಗ್ರೆಸ್ ರಾಜ್ಯಾದ್ಯಂತ ಬೃಹತ್ ಹೋರಾಟ ನಡೆಸುತ್ತಿದೆ. ಈಗಾಗಲೇ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಬೃಹತ್ ಹೋರಾಟ ನಡೆಸುವಂತೆ ಡಿಸಿಎಂ ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರ ನಡೆ ವಿರುದ್ದ ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರು, ಮುಖಂಡರು ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಿಂಸೆಗೆ ತಿರುಗಿದೆ. ಕಾಂಗ್ರೆಸ್ ಕಾರ್ಯಕರ್ತರು ಬಸ್ಸಿಗೆ ಕಲ್ಲು ತೂರಿ ಆಕ್ರೋಶ ಹೊರಹಾಕಿ, ಟೈರ್ಗೆ ಬೆಂಕಿ ಹಚ್ಚಿ ಘೋಷಣೆ ಕೂಗಿದ್ದಾರೆ. ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಬಾಂಗ್ಲಾ ರೀತಿ ಹೋರಾಟ ಮಾಡ್ತೀವಿ ಎಂದು ಕಿಡಿಕಾರಿದ್ದಾರೆ. ಪ್ರತಿಭಟನೆಯಲ್ಲಿ MLC ಐವಾನ್ ಡಿಸೋಜ ಆಕ್ರೋಶ ಹೊರಹಾಕಿದ್ದಾರೆ.
ರಾಜ್ಯಪಾಲರ ನಡೆ ಖಂಡಿಸಿ ನಾರಾಯಣ ಗುರು ವೃತ್ತದಿಂದ ಬೃಹತ್ ಕಾಲ್ನಡಿಗೆ ಜಾಥ ನಡೆಸಿದ್ದು, ಇದರಲ್ಲಿ ಪುತ್ತೂರು, ಸುಳ್ಯ, ಬೆಳ್ತಂಗಡಿಯ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದು, ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸೇರಿ ಹಲವರು ಭಾಗಿಯಾಗಿದ್ದಾರೆ. ಜಾಥಾ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆದು ಪಾಲಿಕೆ ಮುಂಭಾಗ ಬೃಹತ್ ಪ್ರತಿಭಟನಾ ಸಭೆ ನಡೆಸಿದ್ದಾರೆ.
ಇದನ್ನೂ ಓದಿ : ಮಲಯಾಳಂ ಸ್ಟಾರ್ ನಟ ಮೋಹನ್ ಲಾಲ್ ಆಸ್ಪತ್ರೆಗೆ ದಾಖಲು – ಅಭಿಮಾನಿಗಳಿಗೆ ಹೆಚ್ಚಿದ ಆತಂಕ..!