ಬೆಂಗಳೂರು : ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮೇ 26ಕ್ಕೆ ಮುಂದೂಡಿದೆ.
ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ನಂತರ ವಿನಯ್ ಕುಲಕರ್ಣಿ ಜೀವಾವಧಿ ಶಿಕ್ಷೆಗೆ ತಡೆ, ಜಾಮೀನು ಕೋರಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಇಂದು ಈ ಮೇಲ್ಮನವಿ ವಿಚಾರಣೆ ನಡೆದಿದ್ದು, ಆಕ್ಷೇಪಣೆ ಸಲ್ಲಿಸಲು ಸಿಬಿಐ ವಕೀಲರು ಕಾಲಾವಕಾಶ ಕೋರಿದರು. ಬಳಿಕ ಹೈಕೋರ್ಟ್ ವಿಚಾರಣೆಯನ್ನು ಮೇ 26ಕ್ಕೆ ಮುಂದೂಡಿಕೆ ಮಾಡಿದೆ.
ಇದರ ಜೊತೆಗೆ ಇದೇ ಪ್ರಕರಣದಲ್ಲಿ 7 ವರ್ಷ ಶಿಕ್ಷೆಗೆ ಗುರಿಯಾಗಿರುವ ಚನ್ನಕೇಶವ ಟೆಂಗರಿಕರ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯೂ ಮೇ 14ಕ್ಕೆ ಮುಂದೂಡಿಕೆಯಾಗಿದೆ.
ಇದನ್ನೂ ಓದಿ : ರಾಜ್ಯದಲ್ಲಿ 7 ದಿನಗಳ ಕಾಲ ಮಳೆ ಅಬ್ಬರ – 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!








