ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಹೆಚ್ ವಿಶ್ವನಾಥ್!

ಮೈಸೂರು : ಮುಂಬರುವ ಯಾವುದೇ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ, ನನ್ನ ಮಕ್ಕಳು ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿ ಎಂಎಲ್‌ಸಿ ಹೆಚ್ ವಿಶ್ವನಾಥ್ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. 

ಈ ಬಗ್ಗೆ ಮೈಸೂರಿನಲ್ಲಿ ಹೆಚ್ ವಿಶ್ವನಾಥ್ ಮಾತನಾಡಿ, ನಾನು ಹಲವು ಬಾರಿ ಚುನಾವಣೆ ಎದುರಿಸಿದಾಗ ಜನರೇ ಹಣ ನೀಡಿ ಆಶೀರ್ವಾದ ಮಾಡಿದ್ದರು. ಆದರೆ ಈಗ ಹಣ ನೀಡಿ ಚುನಾವಣೆ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ವಿಧಾನಸಭೆ ಚುನಾವಣೆ ಎದುರಿಸಲು 50 ಕೋಟಿ ರೂ. ಹಣ ಬೇಕು.

ರಿಯಲ್ ಎಸ್ಟೇಟ್ ನಡೆಸುವವರು ನಿವೇಶನಗಳನ್ನಾದರೂ ಮಾರಾಟ ಮಾಡಿ ಚುನಾವಣೆ ಎದುರಿಸುತ್ತಾರೆ. ನನಗೆ ಒಂದು ಮನೆ ಒಂದು ನಿವೇಶನ ಮಾತ್ರ ಇವೆ. 50 ಕೋಟಿ ರೂ. ಖರ್ಚು ಮಾಡಿ ಚುನಾವಣೆ ಎದುರಿಸುವಷ್ಟು ಶಕ್ತಿ ಈಗ ನನ್ನಲ್ಲಿ ಇಲ್ಲ ಎಂದರು.

ನನ್ನ ಮಕ್ಕಳು ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಅವರ ಶಕ್ತಾನುಸಾರ ರಾಜಕೀಯದಲ್ಲಿ ಮುಂದುವರಿಯುತ್ತಾರೆ. ನಾನು ಸಹ ರಾಜಕೀಯದಲ್ಲಿ ಮುಂದುವರಿಯುತ್ತೇನೆ, ಆದರೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ : ಜೀವಾವಧಿ ಶಿಕ್ಷೆಗೆ ತಡೆ ಕೋರಿದ್ದ ವಿನಯ್ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ!

Btv Kannada
Author: Btv Kannada

Leave a Comment

Read More