ಮಂಗಳೂರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ MLC ಐವನ್ ಡಿಸೋಜ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ.
ಬುಧವಾರ ರಾತ್ರಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಮಂಗಳೂರು ವೆಲೆನ್ಸಿಯಾದಲ್ಲಿರುವ ಐವನ್ ಡಿಸೋಜ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮನೆಯ ಕಿಟಕಿಯ ಫ್ರೇಮ್‌ಗೆ ಕಲ್ಲು ಬಿದ್ದಿದ್ದು, ಯಾವುದೇ ಹಾನಿಯಾಗಿಲ್ಲ. ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿದ್ದಾರೆ.
ಐವನ್ ಡಿಸೋಜ ಏನು ಹೇಳಿದ್ದರು? ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆಯ ವೇಳೆ ಐವನ್ ಡಿಸೋಜ ಮಾತನಾಡಿ, ರಾಜ್ಯಪಾಲರು ಈ ಕೂಡಲೇ ದೆಹಲಿಗೆ ವಾಪಸ್ ಹೋಗಬೇಕು. ಒಂದು ವೇಳೆ ರಾಜ್ಯಪಾಲರನ್ನು ಹಿಂದಕ್ಕೆ ಕರೆಸಿಕೊಳ್ಳದಿದ್ದರೆ, ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು. ರಾಜ್ಯಪಾಲರನ್ನು ಕಿತ್ತು ಹಾಕಲು ಬಾಂಗ್ಲಾ ಸ್ಥಿತಿ ಬರಬಹುದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಬಳಿಕ ಐವಾನ್ ಡಿಸೋಜ ಅವರ ಹೇಳಿಕೆ ವಿರುದ್ಧ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಆಗಮಿಸಿದ ಬಿಜೆಪಿ ನಿಯೋಗ ದೂರು ದಾಖಲಿಸಿತ್ತು.
ಇದನ್ನೂ ಓದಿ : ಇಂದು ಮಹತ್ವದ ಸಚಿವ ಸಂಪುಟ ಸಭೆ – ಪ್ರಾಸಿಕ್ಯೂಷನ್ ವಿಚಾರದಲ್ಲಿ ದೊಡ್ಡ ಹೆಜ್ಜೆ ಇಡುತ್ತಾ ಸರ್ಕಾರ?