ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಂಗಳೂರಿಗೆ ಆಗಮಿಸಲಿದ್ದು, ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆ ನಾಳೆ ಅವರು ಸಂಚರಿಸುವ ಮಾರ್ಗದಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.
ಈ ವರ್ಷ ಆರ್ಟ್ ಆಫ್ ಲಿವಿಂಗ್ ತನ್ನ 45ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದು, ಸಂಸ್ಥೆಯ ಸ್ಥಾಪಕ ರವಿಶಂಕರ್ ಗುರೂಜಿಯವರು ಇದೇ ಸಂದರ್ಭದಲ್ಲಿ ತಮ್ಮ 70ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಅಂಗವಾಗಿ ಪ್ರಧಾನಿ ಅವರು ಆರ್ಟ್ ಆಫ್ ಲಿವಿಂಗ್ ಕೇಂದ್ರಕ್ಕೆ ನಾಳೆ ಭೇಟಿ ನೀಡಲಿದ್ದಾರೆ.
ವಾಹನ ನಿಲುಗಡೆ ನಿರ್ಬಂಧಿಸಿರುವ ರಸ್ತೆಗಳು
- ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಎಸ್.ಡಿ ರಸ್ತೆ ಜಂಕ್ಷನ್‌ನಿಂದ ಟ್ರಿನಿಟಿ ಜಂಕ್ಷನ್‌ವರೆಗೆ
- HAL ವಿಮಾನ ನಿಲ್ದಾಣ ಗೇಟ್ ನಂ. 30 ರಸ್ತೆಯಲ್ಲಿ ಅಂಬ್ರೆಲಾ ಜಂಕ್ಷನ್‌ನಿಂದ ಗೇಟ್ ನಂ. 30ರ ವರೆಗೆ
- HAL ವಿಮಾನ ನಿಲ್ದಾಣ ಎಕ್ಸಿಟ್ ರಸ್ತೆಯಲ್ಲಿ ಹಳೆ ವಿಮಾನ ನಿಲ್ದಾಣ ರಸ್ತೆಯಿಂದ DGCA ಕಚೇರಿವರೆಗೆ
ಪಾರ್ಕಿಂಗ್ ಸ್ಥಳಗಳು
- HAL ಟ್ರಾನ್ಸ್‌ಪೋರ್ಟ್ ಡಿಪಾರ್ಟ್‌ಮೆಂಟ್ ಪಾರ್ಕಿಂಗ್ (ಎಸ್.ಡಿ ರಸ್ತೆ ಜಂಕ್ಷನ್).
- ಸಾರ್ವಜನಿಕರಿಗೆ- ಸರ್ ಎಸ್.ಎಂ.ವಿ, ಕಾಲೇಜು ಮೈದಾನ, HAL ಬಸ್ ಯಾರ್ಡ್
ಬೆಳಗ್ಗೆ 9 ರಿಂದ ಮಧ್ಯಾಹ್ನ 3ರೆಗೆ ನೈಸ್ ರಸ್ತೆಯಲ್ಲಿಯೂ ಸಂಚಾರ ನಿರ್ಬಂಧ ವಿಧಿಸಲಾಗಿದ್ದು, ಈ ಮಾರ್ಗವಾಗಿ ಬರುವವರಿಗೆ ಪರ್ಯಾಯ ರಸ್ತೆಗಳನ್ನು ಬಳಸುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ : ಬಂಗಾಳ ಬಿಜೆಪಿಯ ಹಿರಿಯ ನಾಯಕನ ಪಾದಮುಟ್ಟಿ ನಮಸ್ಕರಿಸಿದ ಮೋದಿ – ಮಖನ್‌ಲಾಲ್ ಸರ್ಕಾರ್ ಯಾರು?
Author: Btv Kannada
Post Views: 207








